LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಾಹಿತ್ಯ ಸಮ್ಮೇಳನಕ್ಕೂ ಮುನ್ನವೇ ವಿವಾದ; ಟಿಪ್ಪು ಕುರಿತ ವಿಚಾರ ಸಂಕಿರಣಕ್ಕೆ ಪ್ರಗತಿಪರ ಒತ್ತಾಯ

ಮಂಡ್ಯ: 87ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಜರುಗಲಿದೆ. ಸಮ್ಮೇಳನದ ಆರಂಭಕ್ಕೂ ಮೊದಲೇ ಇದೀಗ ಟಿಪ್ಪು ಸುಲ್ತಾನ್ ಬಗೆಗಿನ ವಿಚಾರ ಸಂಕಿರಣದ ವಿವಾದ ಹುಟ್ಟಿಕೊಂಡಿದೆ.

ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ಸುಲ್ತಾನ್ ವಿಚಾರ ಸಂಕಿರಣವನ್ನು ನಡೆಸಬೇಕೆಂದು ಪ್ರಗತಿಪರರು ಆಗ್ರಹ ಮಾಡ್ತಾ ಇದ್ದರೆ, ಇನ್ನೊಂದೆಡೆ ಹಿಂದೂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ.

ಮಂಡ್ಯದಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್ ಅವರನ್ನು ನೆನೆಯಬೇಕು. ಇವರಿಗಿಂತ ಹೆಚ್ಚಾಗಿ ಟಿಪ್ಪು ಸುಲ್ತಾನ್ ಅವರನ್ನು ನೆನಯಬೇಕು. ಟಿಪ್ಪು ರೈತರಿಗೆ, ಜನ ಸಾಮಾನ್ಯರಿಗೆ ಹಾಗೂ ಮಂಡ್ಯ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಟಿಪ್ಪು ಆಡಳಿತ ವ್ಯವಸ್ಥೆಯನ್ನು ನಾವು ಇಂದಿಗೂ ಸಹ ಅಳವಡಿಸಿಕೊಂಡಿದ್ದೇವೆ, ಹೀಗಿರುವಾಗ ಟಿಪ್ಪು ನೆನೆಯುವುದು ನಮ್ಮ ಕರ್ತವ್ಯ ಎಂದು ಪ್ರಗತಿಪರರು ಪಟ್ಟು ಹಿಡಿದಿದ್ದಾರೆ.

ಮಂಡ್ಯದಲ್ಲಿನ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ಕುರಿತ ವಿಚಾರ ಗೋಷ್ಠಿ ಇರಲೇಬೇಕೆಂದು ಪ್ರಗತಿಪರ ಚಿಂತಕ ಜಗದೀಶ್ ಕೊಪ್ಪ ಆಗ್ರಹ ಮಾಡಿದ್ದಾರೆ.

ಇನ್ನೂ ಇದಕ್ಕೆ ಹಿಂದೂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. ಟಿಪ್ಪು ಒಬ್ಬ ಕನ್ನಡ ಹಾಗೂ ಹಿಂದೂ ವಿರೋಧಿಯಾಗಿದ್ದ. ಈತ ಕನ್ನಡದ ಬದಲು ಪರ್ಷಿಯನ್ ಭಾಷೆಗೆ ಹೆಚ್ಚು ಒಲವು ನೀಡುತ್ತಿದ್ದ ವ್ಯಕ್ತಿ. ಇಂತಹ ವ್ಯಕ್ತಿಯ ವಿಚಾರ ಸಂಕೀರ್ಣವನ್ನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಡಲು ಮುಂದಾದರೆ ನಾವು ತಡೆಯುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹ