ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮಹತ್ವ ಸುದ್ದಿ.!
ಬೆಂಗಳೂರು : ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಹತ್ವದ ಮಾಹಿತಿ ನೀಡಿದ್ದು, ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ ನೀಡಲಾಗಿದೆ.
ಸಿಇಟಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಆರ್‌ಡಿ ಸಂಖ್ಯೆ ಇತರೆ ಕ್ಲೇಮುಗಳನ್ನು ತಪ್ಪಾಗಿ ನಮೂದಿಸಿದ ವಿದ್ಯಾರ್ಥಿಗಳು ಸರಿಯಾಗಿ ತಿದ್ದುಪಡಿ ಮಾಡಲು ಮೇ 9 ರಿಂದ 15 ರವರೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದ್ದು, ಅರ್ಜಿ ತಿದ್ದುಪಡಿ ಬಗ್ಗೆ ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ https://kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.