LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ' - ಎಚ್‌ಡಿಕೆಗೆ ಡಿಕೆಶಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ದ ಹೆಚ್‌ ಡಿ ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಕೆಶಿ , ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದೆ ಎಂಬ ಬೇಸರದಲ್ಲಿ ಮಾತನಾಡುತ್ತಿದ್ದಾರೆ. ಅವರ ಮಾತುಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರ ಆರೋಪ ಸತ್ಯಕ್ಕೆ ದೂರವಾದುದು ಎಂದರು.

ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಸಿಎಂ ಕಛೇರಿಯಲ್ಲಿ ಯಾವ ಧಂದೆಯೂ ನಡೆಯುತ್ತಿಲ್ಲ. ಅವರ ಬಳಿ ದಾಖಲೆ ಇದ್ದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಿ ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಗುರು ಪೂರ್ಣಿಮೆಗೆ ಭಗವದ್ಗೀತೆಯನ್ನು ಪಠಿಸಲು ಟೆಕ್ಸಾಸ್‌ನಲ್ಲಿ ಸೇರಿದ 10,000 ಜನ ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಯಡಿಯೂರಪ್ಪ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಅವರಿಗೆ ಒಳ್ಳೆಯದಾಗ್ಲಿ ಯಡಿಯೂರಪ್ಪ ಪ್ರತಿಭಟನೆ ಮೂಲಕ ಕಾಂಗ್ರೆಸ್ ಸರ್ಕಾರದ ಯೊಜನೆಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಜನರಿಗೆ ಮಾತು ಕೊಟ್ಟಿದೇವೆ ಅದನ್ನು ಜಾರಿ ಮಾಡಿದ್ದೇವೆ, ನಾವು ಏನು ಅನಾಹುತ ಮಾಡಿದ್ದೇವೆ ಎಂದು ಪ್ರತಿಭಟನೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಜನರು ಯಡಿಯೂರಪ್ಪ ಅವರಿಗೆ ರೆಸ್ಟ್ ಕೊಟ್ಟಿದ್ದಾರೆ. ಸದ್ಯ ಅವರು ವಿಶ್ರಾಂತಿಯನ್ನು ಮಾಡಲಿ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?ಮನೆಯಲ್ಲಿರುವ ಪಾಲಕ್ ನಲ್ಲಿಯೇ ಮನೆ ಮದ್ದು..!