ಸಿಎಂ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಲಾರಿಗೆ ಡಿಕ್ಕಿ - 7 ಜನರಿಗೆ ಗಾಯ
ಹಾಸನ: ಸಿಎಂ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಪತ್ರಕರ್ತರ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಬ್ರೇಕ್ ಫೇಲ್ ಆಗಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ವಾರ್ತಾ ಇಲಾಖೆಯಿಂದ ನಿಯೋಜಿಸಲಾಗಿದ್ದ ವಾಹನ ಇದಾಗಿದೆ. ಆದರೆ ವಾರ್ತಾ ಇಲಾಖೆಯಲ್ಲಿ ವಾಹನ ಇಲ್ಲದೆ ಆರೋಗ್ಯ ಇಲಾಖೆಯಿಂದ ವಾಹನ ನೀಡಲಾಗಿತ್ತು. ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಈ ಘಟನೆ ನಡೆದಿದ್ದು, ಏಳು ಜನ ಪತ್ರಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪತ್ರಕರ್ತರು ಪಾರಾಗಿದ್ದಾರೆ. ಕಳೆದ ಅನೇಕ ದಿನಗಳಿಂದ ವಾರ್ತಾ ಇಲಾಖೆಗೆ ವಾಹನಗಳು ಇಲ್ಲದೆ ಈ ಹಿಂದೆ ಸಿಎಂ, ಸಚಿವರು ಸೇರಿ ಹಲವರಿಗೆ ಮನವಿ ಸಲ್ಲಿಸಿದರೂ ಈವರೆಗೆ ವಾಹನ ನೀಡಲು ಸರ್ಕಾರ ಮುಂದಾಗಿಲ್ಲ. ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.