LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮೈಸೂರು ಸಂಸದ ಪ್ರತಾಪ ಸಿಂಹ ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ನೀಡಿರುವ ದೂರನ್ನು ಆಧರಿಸಿ ಭಾರತೀಯ ದಂಡ ಸಂಹಿತೆ 504 (ಉದ್ದೇಶಪೂರ್ವಕವಾಗಿ ನಿಂದಿಸಿ ಶಾಂತಿಭಂಗ ಉಂಟು ಮಾಡುವುದು), 153 (ಕೋಮುಗಳ ನಡುವೆ ದ್ವೇಷ ಹುಟ್ಟಿಸುವುದು) ಅಡಿ ಪ್ರತಾಪ ಸಿಂಹ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ‘ಹುಣಸೂರಿನಲ್ಲಿ ಮಂಗಳವಾರ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಪ್ರತಾಪ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ‘ಸೋಮಾರಿ ಸಿದ್ಧ’ ಎಂದು ಏಕವಚನದಲ್ಲಿ ಸಂಬೋಧಿಸಿದ್ದಲ್ಲದೆ, ಜಾತಿ ಜಾತಿಗಳ ನಡುವೆ ದ್ವೇಷ ಹರಡಿಸುವ ಕೆಲಸ ಮಾಡಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ. ಪ್ರತಾಪ ಸಿಂಹ, ಹಿಂದೂ-ಮುಸ್ಲಿಮ್ ಸಮುದಾಯದ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ವಹಿಸಬೇಕು’ ಎಂದು ವಿಜಯಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಜಲಿ ಹತ್ಯೆ ಕೇಸ್: 'ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ'- ಸಂತೋಷ್ ಲಾಡ್'ದೇವರಾಜೇಗೌಡನಿಗೆ ತಲೆ ಕೆಟ್ಟಿದೆ,ಆಸ್ಪತ್ರೆಗೆ ಸೇರಿಸಬೇಕು'- ಡಿಕೆ ಶಿವಕುಮಾರ್'ಪ್ರಜ್ವಲ್ ಮಾಡಿರುವುದು ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ'- ಎಚ್‌.ಡಿ. ದೇವೇಗೌಡ'CD' ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್ - ದೇವರಾಜೇಗೌಡ ಹೇಳಿಕೆ ಬೆನ್ನಲ್ಲೆ ಜೆಡಿಎಸ್‌ನಿಂದ ಟ್ವೀಟ್ ಸಮರಸಿಎಂ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅರೆಸ್ಟ್ ..!ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭಜರ್ಮನಿಯಿಂದ ಲಂಡನ್‌ಗೆ ಪ್ರಯಾಣ ಬೆಳಸಿದ ಪ್ರಜ್ವಲ್‌ ರೇವಣ್ಣದೆಹಲಿ ಮದ್ಯ ನೀತಿ ಪ್ರಕರಣ: ರಾಜಕೀಯ ಪಕ್ಷವೊಂದನ್ನು ಆರೋಪಿಯನ್ನಾಗಿಸಿದ ದೇಶದ ಮೊದಲ ಕೇಸ್‌ಇವರಿಗೆ ಸಿಗಲ್ಲ ಪಿಎಂ ಕಿಸಾನ್‌ 17ನೇ ಕಂತಿನ ಹಣ