LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಚಾರ ಎಸಗಿರುವುದು ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾಡದೆ ಭ್ರಷ್ಟಚಾರ ಮಾಡಿರುವುದನ್ನು ಖಂಡಿಸಿ ಇಂದು ಸಂಸತ್ ಭವನದ ಆವರಣದಲ್ಲಿ ಜನಪ್ರತಿನಿಧಿಗಳ ಪ್ರತಿಭಟನೆ ನಡೆಯಿತು.

ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಜಾತ್ಯತೀತ ಜನತಾದಳ ಪಾರ್ಟಿಗಳ (ಜೆಡಿಎಸ್) ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿದರು.

ಅಲ್ಲದೆ, ಕರ್ನಾಟಕದ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿದ್ದಾರೆ.‘ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂಬರ್ಥವುಳ್ಳ ಹಿಂದಿ ಘೋಷಣೆ ಕೂಗಿದರು. ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಕೇಳಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.

‘ರಿಟರ್ನ್ ದಿ ಲೂಟೆಡ್ ಮನಿ ಬಿಲಾಂಗಿಂಗ್ ಟು ಎಸ್‍ಟಿ ಕಮ್ಯುನಿಟಿ’, ಮುಡಾ ಹಗರಣದಲ್ಲಿ ಕೋಟಿ ಕೋಟಿ ನುಂಗಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ- ಇವೇ ಮೊದಲಾದ ಪ್ಲಕಾರ್ಡ್ ಹಿಡಿದು ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಂಸದ ಜಗದೀಶ ಶೆಟ್ಟರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಖ್ಯಮಂತ್ರಿಗಳು ಮೂಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪಿ.ಸಿ.ಮೋಹನ್ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ- ಮೂಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎರಡು ರೈಲಿನ ನಡುವೆ ಭೀಕರ ಅಪಘಾತ: 6 ಸಾವು, ಹಲವರಿಗೆ ಗಾಯಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ..! ಲೈಂಗಿಕ ಶಿಕ್ಷಣದ ಅರಿವು ನೀಡಲು ತಯಾರಿ!ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯುಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಆಹಾರಗಳು ಇವು…!ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!ಅಕ್ಕ ಪಡೆ ಯೋಜನೆಗೆ sslc or ಪಿಯುಸಿ ಆಗಿದ್ದವರು ಅರ್ಜಿ ಸಲ್ಲಿಸಿಬಹುದು