LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ವಿರುದ್ಧ ಅಸಮಾಧನಗೊಂಡ ಬಿ.ಕೆಹರಿಪ್ರಸಾದ್‌ - ಹೈಕಮಾಂಡ್‌ ಮಧ್ಯಪ್ರವೇಶ

ಬೆಂಗಳೂರು: ತಮ್ಮತ್ತ ಮತ್ತು ತಮ್ಮ ತಳ ಸಮುದಾಯದತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗಿಯೂ ನೋಡುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ​​ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅಸಮಾಧ ವ್ಯಕ್ತಪಡಿಸಿದ್ದರು.

ಇದೀಗ ರಾಜ್ಯ ಕಾಂಗ್ರೆಸ್​​ ನಾಯಕರ ವಿರುದ್ಧ ನಿರಂತರವಾಗಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ.

ಹೈಕಮಾಂಡ್ ನಾಯಕರಿಂದ ಬಿಕೆ ಹರಿಪ್ರಸಾದ್ ರನ್ನು ಸಮಾಧಾನಪಡಿಸುವ ಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ವಿರುದ್ಧದ ವಾಗ್ದಾಳಿಗೆ ಸಂಬಂಧಿಸಿ ಮಲ್ಲಿಕಾರ್ಜುನ ಖರ್ಗೆಯವರು ನಿನ್ನೆ ಬಿಕೆ ಹರಿಪ್ರಸಾದ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಸಮಸ್ಯೆ ಬಗೆಹರಿಸಲು ಸಮಯ ಕೊಡಿ. ನಿಮ್ಮ ಬೇಡಿಕೆಗಳನ್ನು ಸಮಯ ಬಂದಾಗ ಸರಿಪಡಿಸುತ್ತೇವೆ ಎಂದು ಹರಿಪ್ರಸಾದ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅದಕ್ಕೂ ಮೊದಲು ಬಿಕೆ ಹರಿಪ್ರಸಾದರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕರುಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಸಿ ವೇಣುಗೋಪಾಲ ಸಂಪರ್ಕ ಮಾಡಿದ್ದಾರೆ. ಆದರೆ, ಸುರ್ಜೆವಾಲಾ-ವೇಣುಗೋಪಾಲ್ ದೂರವಾಣಿ ಕರೆಗೆ ಬಿಕೆ ಹರಿಪ್ರಸಾದ್ ಸ್ಪಂದಿಸಿಲ್ಲ ಎನ್ನಲಾಗಿದೆ.

ಇಬ್ಬರು ನಾಯಕರಿಗೂ ಕೇರ್​​ ಮಾಡದ ಹಿನ್ನೆಲೆ ನೇರವಾಗಿ ಎಐಸಿಸಿ ಅಧ್ಯಕ್ಷರಿಂದಲೇ ಕರೆ ಹೋಗಿದೆ. ಹರಿ ಪ್ರಸಾದ್ ಅವರು ಮಲ್ಲಿಕಾರ್ಜುನ ಖರ್ಗೆ ಜೊತೆಗೆ ತಮ್ಮ ಅಸಮಾಧಾನದ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!