LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು ಸಲ್ಲಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಸಿದ್ದಾರೆ. 2018-23ರ ಚುನಾವಣೆಯ ಅಫಿಡವಿಟ್ ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಒಂದು ದೂರು ಸಲ್ಲಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ಸಂದರ್ಭ ಸಿದ್ದರಾಮಯ್ಯ ಅವರು ನೀಡಿದ್ದ ಅಫಿಡವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ. ಎಂದು ನಮೂದಿಸಿದ್ದಾರೆ. ಆದರೆ, 2005ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್ ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿದೆ.

ಆದರೆ ಮುಡಾದ 14 ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿ ರೂಪಾಯಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಟಿ.ಜೆ.ಅಬ್ರಹಾಂ ಅವರು ಮುಖ್ಯ ಚುನಾವಣಾಧಿಕಾರಿಗೆ ಎರಡನೇ ದೂರು ಸಲ್ಲಿಕೆ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವುಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ಹುದ್ದೆ : ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಮಾಹಿತಿಏಕದಿನ ಸರಣಿ ಪಂದ್ಯ : ಟೀಮ್‌ ಇಂಡಿಯಾದ ಹೊಸ ‘ತ್ರಿವರ್ಣʼ ಜೆರ್ಸಿ ಪರಿಚಯಿಸಿದ ಬಿಸಿಸಿಐ