LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ ಮಾಡಿದ್ದಾರೆಂದು ಆರೋಪಿ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರಿಗೆ ದಾಖಲೆಗಳ ಸಮೇತ ದೂರು ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಲರಿಗೆ‌ ದೂರು ನೀಡಲಾಗಿದೆ. ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನನ್ನು ಆಶ್ರಯ ಯೋಜನೆಯಡಿ ನಿವೇಶನ ಇಲ್ಲದವರಿಗೆ ಮತ್ತು ಹಿಂದುಳಿದವರಿಗೆ ನೀಡಲು ಜಿಲ್ಲಾಡಳಿತ 1972ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿತ್ತು.

ಬಳಿಕ ಜಮೀನಿನ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ಹಂಚಲಾಗಿತ್ತು. ಆದರೆ, ಸದರಿ ಜಮೀನಿನಲ್ಲಿ ಮೂಲಭೂತ ಸೌಕರ್ಯ ಇಲ್ಲದ ಕಾರಣ ಫಲಾನುಭವಿಗಳು ಮನೆ ನಿರ್ಮಾಣ ಮಾಡಿರಲಿಲ್ಲ. ಈ ಜಮೀನು ಖಾಲಿ ಬಿದ್ದಿತ್ತು.

30 ವರ್ಷಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಈ 1.39 ಎಕರೆ ಜಮೀನನ್ನು ಮಾರಪ್ಪ ಎಂಬ ಹೆಸರಿನ ವ್ಯಕ್ತಿಗೆ ಡಿನೋಟಿಫೈ ಮಾಡುವಂತೆ ಕೋರುತ್ತಾರೆ. ಆದರೆ, ಮಾರಪ್ಪ ಮತ್ತು ಈ ಜಮೀನಿಗೆ ಯಾವುದೇ ಸಂಬಂಧವಿರುದಿಲ್ಲ. ಮಾರಪ್ಪನ ತಂದೆ ಹೆಸರಿನಲ್ಲಿ ಬೇರೊಂದು ಜಾಗದಲ್ಲಿ ಜಮೀನು ಇದೆ.

ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಪ್ಪ ಎಂಬುವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಆದರೆ ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಈ ವಿಚಾರ ತಿಳಿದ ಫಲಾನುಭವಿಗಳು 2011ರಲ್ಲಿ ಅಂದಿನ ಜಿಲ್ಲದಾಧಿಕಾರಿಗಳಿಗೆ ಪತ್ರ ಬರೆದು, ನಮ್ಮ ಜಮೀನು ನಮಗೆ ನೀಡುವಂತೆ ಮನವಿ ಮಾಡುತ್ತಾರೆ. ಆರೋಪದ ದಾಖಲೆಗಳನ್ನು ಮುಂದಿಟ್ಟು ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ