E-PAPER
17 Nov 2026, 12:24:09 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸೆ.15ರಂದು ಜಿಲ್ಲೆಯಲ್ಲಿ 145 ಕಿ.ಮೀ. ಬೃಹತ್ ಮಾನವ ಸರಪಳಿ ನಿರ್ಮಾಣ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ

ಬೆಳಗಾವಿ-೧೩: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೆ.15. ರಂದು ಜಿಲ್ಲೆಯಲ್ಲಿ 145 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿಯನ್ನು ನೀಡಿದರು.

ಸಂವಿಧಾನದ ಮೌಲ್ಯ ಹಾಗೂ ಅದರ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಕಳೆದ ವರ್ಷ ಸೆ. 15ರಂದು ಸಂವಿಧಾನ ಪಿಠೀಕೆಯನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಗಿತ್ತು.

ಈ ಬಾರಿ ಬೀದರ ಜಿಲ್ಲೆಯ ಬಸವಕಲ್ಯಾಣದಿಂದ ಮೂವತ್ತು ಜಿಲ್ಲೆಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಭಾರತದ ಸಂವಿಧಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವದು ಎಂದರು.

ರಾಮದುರ್ಗ ಟು ಕಿತ್ತೂರುವರೆಗೆ ಮಾನವ ಸರಪಳಿ:

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಬಾಗಲಕೋಟೆ ಜಿಲ್ಲೆಯಿಂದ ಜೋಡಿಸಲಾಗುವ ಮಾನವ ಸರಪಳಿಯು ಜಿಲ್ಲೆಯಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಿಂದ ಪ್ರಾರಂಭವಾಗಿ ಕಿತ್ತೂರ ತಾಲೂಕಿನ ತೇಗೂರ ಗ್ರಾಮಕ್ಕೆ ಕೊನೆಗೊಳ್ಳುತ್ತದೆ.
ಜಿಲ್ಲೆಯಲ್ಲಿ 145 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ಸರಪಳಿ ನಿರ್ಮಿಸಲು ಯೋಜಿಸಲಾಗಿದೆ.

ಅಂದಾಜು ಒಂದು ಲಕ್ಷ ಇಪ್ಪತ್ತೈದು ಸಾವಿರ ಜನ ಭಾಗಿಯಾಗುವ ನೀರಿಕ್ಷೆ ಹೊಂದಲಾಗಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ, ಕೆ.ಚಂದರಗಿ, ಸವದತ್ತಿ ತಾಲೂಕಿನ ಸೋಪಡ್ಲ್, ಯರಗಟ್ಟಿ, ಇಂಚರಲ ಕ್ರಾಸ್, ಬೈಲಹೊಂಗಲ ತಾಲೂಕಿನ ನೇಸರಗಿ ಕ್ರಾಸ್, ಸುತಗಟ್ಟಿ ಕ್ರಾಸ್, ಬೆಳಗಾವಿ ತಾಲೂಕಿನ ಕರಡಿಗುದ್ದಿ, ಸಾಂಬ್ರಾ, ಬೆಳಗಾವಿ ನಗರ, ಸುವರ್ಣ ವಿಧಾನ ಸೌಧ, ಹಿರೇಬಾಗೆವಾಡಿ, ಎಂ.ಕೆ.ಹುಬ್ಬಳ್ಳಿ, ಇಟಗಿ ಕ್ರಾಸ್, ಚನ್ನಮನ ಕಿತ್ತೂರು ಮಾರ್ಗವಾಗಿ ತೇಗೂರ ಗ್ರಾಮದ ವರೆಗೆ ಮಾನವರ ಸರಪಳಿಯನ್ನು ನಿರ್ಮಿಸಲಾಗುವದು. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸೆ. 15 ರಂದು ಬೆಳಗ್ಗೆ 9.30 ರಿಂದ 10.30ರ ವರೆಗೆ ಜರುಗಲಿರುವ ಈ ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಗ್ರಾಮ ಪಂಚಾಯತಗಳ ಅಧ್ಯಕ್ಷರು, ಸದಸ್ಯರು, ಸಂಘ-ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳು ಪಾಲ್ಗೊಳ್ಳಲಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮನವಿ ಮಾಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಮಾತನಾಡಿ ಕಾರ್ಯಕ್ರಮದ ಯಶಸ್ವಿಗಾಗಿ ಪ್ರತಿ ಗ್ರಾಮಗಳಿಂದ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳುವಂತೆ ಕ್ರಮ ವಹಿಸಲಾಗಿದೆ. ಸ್ಥಳೀಯವಾಗಿ ತಂಡಗಳನ್ನು ರಚಿಸಿಲಾಗಿದ್ದು, ಪ್ರತಿ 200 ಮೀ.ಗೆ ಒಬ್ಬ ಸೆಕ್ಟೆರ್ ಅಧಿಕಾರಿಯನ್ನು, ಪ್ರತಿ 1 ಕಿ.ಮೀ. ತಾಲೂಕು ಮಟ್ಟದ, ಹಾಗೂ ಪ್ರತಿ 5 ಕಿ.ಮೀ. ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೇಮಿಸಲಾಗಿದೆ.

ಮಾನವ ಸರಪಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನರು ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಕೆ.ಎಸ್.ಆರ್.ಟಿ.ಸಿ ಹಾಗೂ ಶಾಲಾ ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೆಶಕ ರಾಮನಗೌಡ ಕನ್ನೋಳಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.