LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ: ಸಮಯಪ್ರಜ್ಞೆ ಮೆರೆದ ಕಾರ್‌ ಡ್ರೈವರ್‌!

ಮುಂಬೈ : ಮುಂಬೈನ ಅಟಲ್‌ ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಕ್ಯಾಬ್‌ ಚಾಲಕ ಮತ್ತು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ ಘಟನೆಯೂ ಶುಕ್ರವಾರ ಸಂಜೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್‌ ಪ್ರದೇಶದ ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದೆ. ಸೇತುವೆ ಮೇಲೆ ಹತ್ತಿ ಏಕಾಏಕಿ ನೀರಿಗೆ ಹಾರಲು ಯತ್ನಿಸಿದ್ದು ಇದನ್ನು ಗಮನಿಸಿದ ಟ್ಯಾಕ್ಸಿ ಚಾಲಕ ಆಕೆ ಕೈಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವಲ್ಲಿ ಸಫಲನಾಗಿದ್ದಾನೆ.

ಕೂಡಲೇ ಅಲ್ಲಿಗೆ ಧಾವಿಸಿ ಬಂದ ಗಸ್ತು ಪೊಲೀಸರು ಜೀವ ಪಣಕ್ಕಿಟ್ಟು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಂಬೈನಿಂದ ನವಿ ಮುಂಬೈಗೆ ಹೋಗುವ ಮಾರ್ಗದಲ್ಲಿರುವ ಫ್ಲೈಓವರ್‌ನಿಂದ ಮಹಿಳೆ ಸಮುದ್ರಕ್ಕೆ ಹಾರಲು ಯತ್ನಿಸಿದ್ದಾಳೆ. ಮಹಿಳೆಯೂ ಮುಂಬೈನ ಮುಲುಂಡ್ ಪ್ರದೇಶದ ನಿವಾಸಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಚಾಲಕನ ಸಮಯಪ್ರಜ್ಞೆಗೆ ಪೊಲೀಸರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಮೋಚನಾ ಅವರಿಗೆ ಪಿಹೆಚ್ ಡಿ ಪದವಿಭದ್ರಾ ಯೋಜನೆ : ಕೇಂದ್ರ ಸರಕಾರ ನಿರ್ಲಕ್ಷ : ಸಿಎಂ ಸಿದ್ದರಾಮಯ್ಯಮಂಗಳೂರು: ಮಸಾಜ್‌ ಸೆಂಟರ್‌ ಮೇಲೆ ದಾಳಿ ಪ್ರಕರಣ- ರಾಮ ರಾಮಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಬಂಧನಚೆಕ್ ಬೌನ್ಸ್ ಪ್ರಕರಣ - ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆಕಾಲೇಜುಗಳಲ್ಲಿ ಹೊಸ ವೃತ್ತಿಜೀವನ ಆರಂಭಕ್ಕೆ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ನಿರ್ಧಾರಕುಂಭಮೇಳದಲ್ಲಿ ವೈರಲ್‌ ಆದ ಮೊನಾಲಿಸಾ ಫೋಟೊಗಾಗಿ ಟೆಂಟ್​ಗೆ ನುಗ್ಗಿದ ಜನ- ನನಗೆ ಭಯವಾಗಿದೆ ಎಂದ ಚೆಲುವೆಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005BELನಲ್ಲಿ 300ಕ್ಕೂ ಹೆಚ್ಚು ಉದ್ಯೋಗಗಳಿಗೆ ಅರ್ಜಿ ಆಹ್ವಾನ'ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್'?- ವಿಜಯೇಂದ್ರCanara ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ