LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಸ್ಥಗಿತಗೊಂಡಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಪುನರಾರಂಭ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ ಸ್ಪಷ್ಠೀಕರಣ ನೀಡಲಾಗಿದೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಲಯಗಳಲ್ಲಿ 2017 ರಿಂದ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ.” ಈ ಸಂಬಂಧ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳನ್ನು ಸಂಬಂಧಪಟ್ಟ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟವನ್ನು ರಿಯಾಯಿತಿ ದರಗಳಲ್ಲಿ ಒದಗಿಸುತ್ತಿದೆ.

ಮುಂದುವರಿದು, ಗುತ್ತಿಗೆ ಪಡೆದಿರುವ ಸಂಸ್ಥೆಯು ಸಲ್ಲಿಸಿರುವ ಬಿಲ್ಲುಗಳಲ್ಲಿ ಬಾಕಿ ಮೊತ್ತ ಅಂದಾಜು 40.00 ಕೋಟಿ ರೂ.ಗಳನ್ನು ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆಯಲ್ಲಿ ನೀರಿನ ಮತ್ತು ವಿದ್ಯುತ್ ಬಿಲ್‌ಗಳನ್ನು ಪಾವತಿಸದೇ ಇರುವುದರಿಂದ ದಿನಾಂಕ: 18-07-2024ರಂದು ಸ್ಥಗಿತಗೊಳಿಸಿರುತ್ತಾರೆ.

ಈ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿ ಆಹಾರದ ಗುಣಮಟ್ಟ, ಪ್ರಮಾಣವನ್ನು ಪರಿಶೀಲಿಸಲು ಪ್ರತಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾರ್ಷ್ಲ್‌ಗಳನ್ನು ನಿಯೋಜಿಸಲಾಗಿದೆ. ಸದರಿ ಮಾರ್ಷಲ್‌ಗಳು ಪ್ರತಿ ನಿತ್ಯ ಖರ್ಚಾಗುವ ಊಟದ ಪ್ರಮಾಣದ ವರದಿ ಅನ್ವಯ ನವೆಂಬರ್-2021 ರಿಂದ ತಹಲ್‌ವರೆಗೆ ಸಂಬಂಧಪಟ್ಟ ಸಂಸ್ಥೆಯವರಿಗೆ ಅನುದಾನವನ್ನು ಪಾವತಿ ಮಾಡಲಾಗಿರುತ್ತದೆ. ಆದರೆ, ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ನಾಗರೀಕರಿಗೆ ಒದಗಿಸಿರುವ ಆಹಾರಕ್ಕಿಂತ ಹೆಚ್ಚಿನ ಮಟ್ಟದ ಬಿಲ್‌ನ್ನು ಸಲ್ಲಿಸಿರುವುದರಿಂದ ಅನುದಾನವನ್ನು ಕಡಿತಗೊಳಿಸಲಾಗಿರುತ್ತದೆ.

ಗುತ್ತಿಗೆದಾರರ ಜೊತೆ ಮಾಡಿಕೊಂಡಿರುವ ಒಡಂಬಡಿಕೆಯ ಪ್ರಕಾರ ನೀರು ಮತ್ತು ವಿದ್ಯುತ್ ಬಿಲ್‌ನ್ನು ಸಂಬಂಧಪಟ್ಟ ಸಂಸ್ಥೆಯವರೇ ಪಾವತಿಸಬೇಕಾಗಿರುತ್ತದೆ. ಈ ಬಗ್ಗೆ ದಿನಾಂಕ: 18-07-2024ರಂದು ಮುಖ್ಯ ಆರೋಗ್ಯಾಧಿಕಾರಿ(ಸಾ.ಆ)ರವರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಸಂಸ್ಥೆಯವರ ಪ್ರತಿನಿಧಿ, ದಕ್ಷಿಣ ವಲಯ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿರುತ್ತದೆ. ಸದರಿ ಸಭೆಯಲ್ಲಿ ಎಲ್ಲಾ ವಿಷಯಗಳ ಕುರಿತು ಸಂಸ್ಥೆಯ ಪ್ರತಿನಿಧಿಗಳಿಗೆ ವಿವರಿಸಿ, ತುರ್ತಾಗಿ ಸ್ಥಗಿತಗೊಂಡಿರುವ 11 ಇಂದಿರಾ ಕ್ಯಾಂಟೀನ್‌ಗಳನ್ನು ಪುನಾರಂಭಿಸುವಂತೆ ಸೂಚಿಸಲಾಗಿರುತ್ತದೆ.

ದಕ್ಷಿಣ ವಲಯದಲ್ಲಿ ಮುಚ್ಚಿದ್ದ 11 ಇಂದಿರಾ ಕ್ಯಾಂಟೀನ್‌ಗಳನ್ನು ದಿನಾಂಕ: 19-07-2024 ರಿಂದ ಅಂದರೆ ಗುತ್ತಿದಾರರು ಪುನರಾರಂಭ ಮಾಡಿರುತ್ತಾರೆ. ಮುಂದಿನ ದಿನಗಳಲ್ಲಿ ಈ ರೀತಿ ಪುನರಾವರ್ತನೆಗೊಂಡಲ್ಲಿ ಕಾನೂನು ರೀತಿ ಕ್ರಮಕೈಗೊಂಡು ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗುವುದೆಂದು ಸಂಬಂಧಪಟ್ಟ ಸಂಸ್ಥೆಯವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್* ರವರು ತಿಳಿಸಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿ