LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ

ವಾಷಿಂಗ್ಟನ್: ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭಾನುವಾರ ಬೆಳಗ್ಗಿನ ಜಾವ 1:30-2:30 ರ ನಡುವೆ ಬೆಂಕಿ ಹಚ್ಚಲಾಗಿದೆ. ಕೇವಲ 5 ತಿಂಗಳ ಅವಧಿಯಲ್ಲಿ ಭಾರತೀಯ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿ ಬೆಂಬಲಿಗರು ನಡೆಸಿರುವ 2ನೇ ದಾಳಿಯಾಗಿದೆ. ಸ್ಥಳೀಯ ಮಾಧ್ಯಮಗಳು ಹಂಚಿಕೊಂಡಿರುವ ವೀಡಿಯೋದಲ್ಲಿ ರಾಯಭಾರ ಕಚೇರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಈ ವೀಡಿಯೋವನ್ನು ಖಲಿಸ್ತಾನಿ ಬೆಂಬಲಿಗರು ಬಿಡುಗಡೆ ಮಾಡಿರುವುದಾಗಿ ತಿಳಿಸಲಾಗಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್, ವಿಧ್ವಂಸಕತೆ ಹಾಗೂ ಬೆಂಕಿ ಹಚ್ಚುವ ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸುತ್ತದೆ. ಅಮೆರಿಕದಲ್ಲಿ ರಾಜತಾಂತ್ರಿಕ ಸೌಲಭ್ಯ ಹಾಗೂ ವಿದೇಶೀ ರಾಜತಾಂತ್ರಿಕರ ವಿರುದ್ಧ ಇಂತಹ ವಿಧ್ವಂಸಕತೆ ಹಾಗೂ ಹಿಂಸಾಚಾರ ಎಸಗುವುದು ಕ್ರಿಮಿನಲ್ ಅಪರಾಧ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ