LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಸೂಪರ್ ಹಿಟ್ ಸಿನಿಮಾ "ಹೊಯ್ಸಳ" | ಇದೇ ಆಗಸ್ಟ್ 13 ರಂದು ಭಾನುವಾರ ಸಂಜೆ 6 ಗಂಟೆಗೆ..!

ಪ್ರೇಕ್ಷಕರ ಮನರಂಜನೆಗಾಗಿ ಸದಾಕಾಲ ಹೊಸತನವನ್ನು ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ನಟ ರಾಕ್ಷಸ ಡಾಲಿ ಧನಂಜಯ್ ಅಭಿನಯದ "ಗುರುದೇವ್ ಹೊಯ್ಸಳ" ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಈ ಸಿನಿಮಾವು ಕಿರುತೆರೆಯಲ್ಲಿ ರಾರಾಜಿಸಲಿದೆ.

ಪಟ್ಟಣದ ಅತ್ಯಂತ ನಿಷ್ಠಾವಂತ ಹಾಗು ಶಕ್ತಿಶಾಲಿ ಪೊಲೀಸ್ ಅಧಿಕಾರಿ ಗುರುದೇವ್ ಹೊಯ್ಸಳ. ರಾಜಕಾರಣಿಗಳು ಹಾಗು ದರೋಡೆಕೋರರಿಂದ ಭೂ ಮಾಫಿಯಾವನ್ನು ತಡೆಗಟ್ಟುವಲ್ಲಿ ಗುರುದೇವ್ ಹೇಗೆ ಯಶಸ್ವಿಯಾಗುತ್ತಾರೆ ಎಂಬುದು ಈ ಸಿನಿಮಾದ ಮುಖ್ಯ ಕಥೆ. ಇನ್ನು ಇದೊಂದು ಸಾಮಾನ್ಯ ಪೊಲೀಸ್ ವಿಲನ್ ಕತೆ ಮಾತ್ರವಲ್ಲದೆ ಭಾಷೆ-ನೆಲದ ವಿಷಯವನ್ನು ಒಳಗೊಂಡ ಸುಂದರ ಕತೆಯಾಗಿದೆ.

'ಹೊಯ್ಸಳ' ಸಿನಿಮಾದ ನಾಯಕನಾಗಿ ಡಾಲಿ ಧನಂಜಯ್ ಹಾಗು ನಾಯಕಿಯಾಗಿ ಅಮೃತ ಅಯ್ಯಂಗಾರ್ ನಟಿಸಿದ್ದಾರೆ. ಜೊತೆಗೆ ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ, ನಾಗಭೂಷಣ್ ಸೇರಿದಂತೆ ಇನ್ನು ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿರುವ ಈ ಸಿನಿಮಾವು ಇದೇ ಮೊದಲ ಬಾರಿಗೆ ಕಿರುತೆರೆಯ ಮೂಲಕ ನಿಮ್ಮ ಮನೆಯಂಗಳಕ್ಕೆ ಬರಲಿದೆ.

ಈ ನಿಟ್ಟಿನಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಪ್ರೇಕ್ಷಕರಿಗಾಗಿ ಉಡುಗೊರೆಯನ್ನು ನೀಡಲು ಸಜ್ಜಾಗಿದೆ. 'ಗುರುದೇವ್ ಹೊಯ್ಸಳ' ಸಿನಿಮಾವನ್ನು ಟಿವಿಯಲ್ಲಿ ನೋಡಿ, ಅಲ್ಲಿ ಕೇಳುವ 2 ಸರಳ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿ 43 ಇಂಚಿನ LED TV ಯನ್ನು ನಿಮ್ಮದಾಗಿಸಿಕೊಳ್ಳಿ.

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಿಮ್ಮ ಮನೆಗೆ ಬರ್ತಿದೆ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ "ಗುರುದೇವ್ ಹೊಯ್ಸಳ" ಇದೇ ಆಗಸ್ಟ್ 13 ರಂದು ಭಾನುವಾರ ಸಂಜೆ 6.00 ಕ್ಕೆ ನಿಮ್ಮ ನೆಚ್ಚಿನ 'ಸ್ಟಾರ್ ಸುವರ್ಣ' ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲ್ವರು ಉಗ್ರರರಿಂದ ಒಳನುಸುಳಲು ಯತ್ನ: ಓರ್ವ ಉಗ್ರನ ಹತ್ಯೆಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್