LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ವಾತಂತ್ರ್ಯೋತ್ಸವದಂದು ರಾಷ್ಟ್ರಪತಿ ಶೌರ್ಯ ಪದಕ ಸೇರಿ 1,037 ಮಂದಿಗೆ ಪೊಲೀಸ್ ಪದಕ

ನವದೆಹಲಿ: ಕೇಂದ್ರೀಯ ಹಾಗೂ ರಾಜ್ಯ ಪೊಲೀಸ್ ಪಡೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 1,037 ಸಿಬ್ಬಂ ದಿಗೆ ಕೇಂ ದ್ರ ಸರ್ಕಾರವು ಸ್ವಾತಂತ್ರ್ಯೋ ತ್ಸವದ ಮುನ್ನಾದಿನ (ಬುಧವಾರ) ಪೊಲೀಸ್ ಪದಕಗಳನ್ನು ಘೋಷಿಸಿದೆ.

ಕೇಂದ್ರ ಗೃಹ ಸಚಿವಾಲಯದ ಹೇಳಿಕೆ ಪ್ರಕಾರ, ರಾಷ್ಟ್ರ ಪತಿ ಶೌರ್ಯ ಪದಕ ಸೇರಿದಂತೆ ಶೌರ್ಯ ಪದಕಕ್ಕೆ 214 ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ.

ತೆಲಂಗಾಣದ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಛದುವು ಯದಯ್ಯ ಅವರಿಗೆ ಏಕೈಕ ರಾಷ್ಟ್ರಪತಿ ಶೌರ್ಯ ಪದಕ ಘೋಷಣೆಯಾಗಿದೆ. ಅವರು 2022ರ ಜುಲೈ 25ರಂದು ಇಬ್ಬರು ಕುಖ್ಯಾತ ಸರಗಳ್ಳರು ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆದಾರರನ್ನು ಬಂಧಿಸಿದ್ದರು. ದುಷ್ಕರ್ಮಿ ಗಳು ಸಾಕಷ್ಟು ಬಾರಿ ಚಾಕುವಿನಿಂದ ಇರಿದರೂ, ಅವರು ತಪ್ಪಿಸಿಕೊಳ್ಳದಂತೆ ಹಿಡಿದಿದ್ದ ಯದಯ್ಯ, ಗಂಭೀರ ಗಾಯಗೊಂಡಿದ್ದ ಅವರು 17 ದಿನ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಗೃಹ ಸಚಿವಾಲಯ ತಿಳಿಸಿದೆ.

ಗರಿಷ್ಠ 52 ಶೌರ್ಯ ಪದಕಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂ ದಿಗೆ ಲಭಿಸಿವೆ. ಜಮ್ಮು ಮತ್ತು ಕಾಶ್ಮೀ ರ ಪೊಲೀಸರಿಗೆ 31, ಉತ್ತರ ಪ್ರದೇ ಶ ಹಾಗೂ ಮಹಾರಾಷ್ಟ್ರ ಪೊಲೀಸರಿಗೆ ತಲಾ 17, ಛತ್ತೀ‍ಸಗಢ ಪೊಲಸರಿಗೆ 15, ಮಧ್ಯಪ್ರದೇ ಶ ಪೊಲೀಸರಿಗೆ 12 ಪದಕಗಳು ದೊರೆತಿವೆ.

ವಿಶಿಷ್ಟ ಸೇವೆ ಸಲ್ಲಿಸಿದ 94 ಮಂದಿಗೆ ರಾಷ್ಟ್ರ ಪತಿಯವರ ಸೇವಾ ಪದಕ ಘೋ ಷಿಸಲಾಗಿದೆ. ಶ್ಲಾಘನ ಯ ಸೇ ವೆಗಾಗಿ 729 ಮಂ ದಿಗೆ ಪದಕ ಪ್ರಕಟಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆ