LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.

ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿಲ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ.

ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026