Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Districts Chitradurga

ಹಿರಿಯೂರು ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ  ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ

   ಬರ ವೀಕ್ಷಣೆ: ರೈತರ ನೆರವಿಗೆ ಸರ್ಕಾರ ಬದ್ಧ

ಹಿರಿಯೂರು : ತಾಲ್ಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯಾಗಿದ್ದು, ಕೇವಲ ಶೇ.11ರಷ್ಟು ಮಾತ್ರ ಬಿತ್ತನೆಯಾಗಿದೆ. ಮಳೆ ಅಭಾವ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ರೈತರ ಪರವಾಗಿ ನಿಲ್ಲಲಿದೆ ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.

ಹಿರಿಯೂರು ತಾಲ್ಲೂಕಿನ ಆನೆಸಿದ್ರಿ ಗ್ರಾಮದ ವ್ಯಾಪ್ತಿಯಲ್ಲಿ ರೈತ ಜಯರಾಮಯ್ಯ ಅವರ ಜಮೀನಿಗೆ ಬುಧವಾರ ಭೇಟಿ ನೀಡಿ, ಬೆಳೆ ಹಾಗೂ ಕೃಷಿ ಭೂಮಿಯನ್ನು ಪರಿಶೀಲಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಹಲವೆಡೆ ಭೀಕರ ಬರಗಾಲ ಎದುರಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಮಳೆ ಕೊರತೆಯಿಂದಾಗಿ ತೀವ್ರ ಬರ ಆವರಿಸಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಸಭೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ಬರ ಪರಿಸ್ಥಿತಿ ಕುರಿತು ಪರಿಶೀಲಿಸಲು ಪ್ರವಾಸ ಕೈಗೊಳ್ಳುತ್ತಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಸಚಿವರಿಗೆ ಬರ ನಿರ್ವಹಣೆ ಜವಾಬ್ದಾರಿಯನ್ನು ಹಂಚಿದ್ದಾರೆ. ಅಧಿಕಾರಿಗಳು ಸಿದ್ಧಪಡಿಸಿದ ವರದಿಗಳನ್ನು ಪರಿಶೀಲಿಸುವುದಲ್ಲದೆ, ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನೈಜ ಪರಿಸ್ಥಿತಿಯ ವರದಿ ತಯಾರಿಸಲಾಗುವುದು. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗುವುದು. ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಬಿತ್ತನೆಯಾಗದ ಪ್ರದೇಶಗಳನ್ನು ವೀಕ್ಷಿಸಲಾಗಿದೆ ಎಂದರು.

'ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ' ಅಡಿಯಲ್ಲಿ ಪರಿಹಾರ ದೊರೆಯಲಿದೆ. ಬಿತ್ತನೆ ಮಾಡದಿದ್ದರೂ ಶೇ 25ರಷ್ಟು  ಬಿತ್ತನೆ ವೈಫಲ್ಯ ನಷ್ಟ ಪರಿಹಾರ ಸಿಗಲಿದೆ. ಬೆಳೆ ಹಾನಿಯಾದ ರೈತರಿಗೂ ವಿಮೆ ಮೂಲಕ ನೆರವು ಸಿಗಲಿದೆ’ ಎಂದರು.

‘ಫಸಲ್ ಭೀಮಾ ಯೋಜನೆಯ ನೋಂದಣಿ ಗಡುವನ್ನು ಮುಂದುವರಿಸಲು ಮುಖ್ಯಮಂತ್ರಿಗಳು ಕೇಂದ್ರ ಕೃಷಿ ಸಚಿವರಿಗೆ ಈಗಾಗಲೇ ಪತ್ರ ಬರೆದಿದ್ದಾರೆ. ಅಲ್ಲದೆ, ರಾಗಿ ಬಿತ್ತನೆಗೆ ಇನ್ನು ಕಾಲಾವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಸಚಿವ ರಘುಮೂರ್ತಿ ಸ್ಪಷ್ಟಪಡಿಸಿದರು.

*2.30 ಲಕ್ಷ ರೈತರಿಂದ ವಿಮೆ ನೋಂದಣಿ:*

‘ಜಿಲ್ಲೆಯಲ್ಲಿ ಒಟ್ಟು 3 ಲಕ್ಷಕ್ಕೂ ಹೆಚ್ಚು ರೈತರಿದ್ದು ಬೆಳೆ ವಿಮೆ ನೊಂದಣಿಗೆ ಅಭಿಯಾನ ನಡೆಸಿ ಜಾಗೃತಿ ಮೂಡಿಸಲಾಗಿದೆ. ಇದರ ಪರಿಣಾಮವಾಗಿ ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 2.30 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಿಂದ ಬರ ಎದುರಿಸಲು ರೈತರಿಗೆ ನೆರವಾಗಲಿದೆ’ ಎಂದು ವಿವರಿಸಿದರು.ಇದೇ ವೇಳೆ, ಕುಡಿಯುವ ನೀರಿನ ಅಭಾವವಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ರಘುಮೂರ್ತಿ ತಿಳಿಸಿದರು.

ಹಿರಿಯೂರು ತಾಲ್ಲೂಕಿನಲ್ಲಿ ಶೇ. 11ರಷ್ಟು ಮಾತ್ರ ಬಿತ್ತನೆಯಾಗಿದ್ದು, ಜಿಲ್ಲೆಯಲ್ಲಿ ಶೇ.80ಕ್ಕೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡದಿರುವ ರೈತರಿಗೆ ಶೇ 25ರಷ್ಟು ಬಿತ್ತನೆ ವೈಫಲ್ಯ ಹಾಗೂ ಬಿತ್ತನೆ ಮಾಡಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಫಸಲ್ ಭೀಮಾ ಯೋಜನೆಯಡಿ ಪರಿಹಾರ ಕೊಡಿಸಲು ಸರ್ಕಾರ ಬದ್ಧವಾಗಿದೆ. ಭೀಮಾ ಯೋಜನೆಗೆ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ ಎಂದು ಸಚಿವರು ತಿಳಿಸಿದರು.

ಆಗಸ್ಟ್ ಅಂತ್ಯಕ್ಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ಗೋನೂರು ಕೆರೆಗೆ ನೀರು ಹರಿಸಲಾಗುವುದು. ಮುಂದಿನ ವರ್ಷದ ಅಂತ್ಯ ಅಕ್ವಾ ಡೆಕ್ಟ್ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು. ಜೆ.ಜಿ.ಹಳ್ಳಿ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ರೂ.244 ಕೋಟಿ ಬಿಡುಗಡೆ ಮಾಡಲಾಗಿದೆ. ಸಣ್ಣ ನೀರಾವರಿ ಇಲಾಖರ ಮೂಲಕ 16 ಕೆರೆಗಳಿಗೆ ನೀರು ತುಂಬಿಸಲು ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಸಚಿವ ಟಿ.ರಘುಮೂರ್ತಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ವರದಿ : ಶ್ರೇಯಸ್. ಎಸ್ ಚಿತ್ರದುರ್ಗ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST