ಹಲವು ವರ್ಷಗಳಿಂದ ಒಂದೇ ಕಡೆ ಠಿಕಾಣಿ ಹಾಕಿದ್ದ ಅಧಿಕಾರಿಗಳಿಗೆ ಶಾಕ್.!
ಬೆಂಗಳೂರು: ಒಂದೇ ಸ್ಥಳದಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ ಕಂದಾಯ ಇಲಾಖೆ ಅಧಿಕಾರಿಗಳ ಪಟ್ಟಿ ಕೊಡಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿವೆ. ಅಂತಹ ಅಧಿಕಾರಿಗಳ ಪಟ್ಟಿ ಕಳುಹಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆ ಇತ್ತೀಚೆಗೆ ನಡೆದಿದ್ದು, ಜನರ ಸಮಸ್ಯೆಯನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಲು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚಿಸಲಾಗಿದೆ.
ಅನೇಕ ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ, ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿದ್ದು, ಅಂತಹ ಅನೇಕ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅಂತಹ ಅಧಿಕಾರಿಗಳ ಪಟ್ಟಿ ಕಳುಹಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.!
@ ಇದರಿಂದ ಒಂದೇ ಕಡೆ ಜಾಂಡಹಾಕಿದ್ದ ಅಧಿಕಾರಿಗಳು ಎತ್ತಂಗಡಿ ಆಗಬಹುದಂತೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.