LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಲಸಿನಹಣ್ಣಿನ ಇಡ್ಲಿ ಮಾಡುವ ವಿಧಾನ

ಬೇಗನೆ ತಯಾರಾಗಿ ಬಿಡುವ ಹಲಸಿನಹಣ್ಣಿನ ಇಡ್ಲಿ ಇದೆ. ಹಲಸಿನಹಣ್ಣಿನ ಸೀಸನ್ ಮುಗಿಯುವುದರೊಳಗೆ ಮಾಡಿಕೊಂಡು ಸವಿಯಿರಿ.

ಬೇಕಾಗುವ ಸಾಮಾಗ್ರಿಗಳು:

15 ರಿಂದ 20ರಷ್ಟು ಹಲಸಿನಹಣ್ಣಿನ ತೊಳೆ, ಅಕ್ಕಿ ತರಿ – 1 ಕಪ್, ಬೆಲ್ಲ – 1 ಕಪ್ (ಪುಡಿ ಮಾಡಿಕೊಂಡಿದ್ದು), ತುಪ್ಪ – 1 ಟೀ ಸ್ಪೂನ್, ಉಪ್ಪು – ಚಿಟಿಕೆ, ಏಲಕ್ಕಿ – ಚಿಟಿಕೆ.

ಮಾಡುವ ವಿಧಾನ:

ಮೊದಲಿಗೆ ಹಲಸಿನಹಣ್ಣಿನ ತೊಳೆಗಳ ಬೀಜ ತೆಗೆದು ತೊಳೆಗಳನ್ನು ಒಂದು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಿ, ನೀರು ಸೇರಿಸಬೇಡಿ. ಗ್ಯಾಸ್ ಮೇಲೆ ಒಂದು ಪಾತ್ರೆ ಇಟ್ಟು ಅದಕ್ಕೆ ಅಕ್ಕಿ ತರಿಯನ್ನು ಸೇರಿಸಿ 5 ನಿಮಿಷಗಳ ಕಾಲ ಹುರಿಯಿರಿ. ನಂತರ ಮಿಕ್ಸಿಯಲ್ಲಿ ರುಬ್ಬಿದ ಹಲಸಿನ ಹಣ್ಣಿನ ಮಿಶ್ರಣಕ್ಕೆ ಈ ತರಿಯನ್ನು ಹಾಕಿ ಬೆಲ್ಲ, ಏಲಕ್ಕಿ ಪುಡಿ, ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ½ ಗಂಟೆಗಳ ಕಾಲ ಹಾಗೆಯೇ ಇಡಿ. ನಂತರ ಒಂದು ತಟ್ಟೆಗೆ ತುಪ್ಪ ಸವರಿ ಅದಕ್ಕೆ ಮಾಡಿಟ್ಟುಕೊಂಡ ಈ ಮಿಶ್ರಣ ಹಾಕಿ ಇಡ್ಲಿ ಪಾತ್ರೆಯ ಆವಿಯಲ್ಲಿ ಬೇಯಿಸಿಕೊಂಡರೆ ರುಚಿಕರವಾದ ಹಲಸಿನಹಣ್ಣಿನ ಇಡ್ಲಿ ಸವಿಯಲು ಸಿದ್ಧ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌