LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಸೆಮಣೆಗೇರಿದ ಮೂರು ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ – ಕೈಯ್ಯಲ್ಲಿ ಹಾಕಿದ್ದ ಮದರಂಗಿ ಮಾಸೋ ಮುನ್ನವೇ ಹಾರಿಹೋಯ್ತು ಪ್ರಾಣ

ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವತಿಯನ್ನು 26 ವರ್ಷದ ಕೃಷ್ಣವೇಣಿ (26) ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದಷ್ಟೇ ಕೃಷ್ಣವೇಣಿಯನ್ನು ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ.

ಕೋಲಾರ ಮೂಲದ ಪೃಥ್ವಿರಾಜ್ (30) ಎಂಬಾತನ ಜೊತೆಗೆ ಕೃಷ್ಣವೇಣಿಗೆ ಕುಟುಂಬಸ್ಥರು ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು ಎನ್ನಲಾಗಿದ್ದು, ಪತಿ ಪೃಥ್ವಿರಾಜ್​​ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಪ್ರೀತಿಯ ಮಗಳನ್ನು ಕಳೆದುಕೊಂಡ ಯುವತಿಯ ಪೋಷಕರು, ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಅಳಿಯನ ಕುಟುಂಬಸ್ಥರ ವಿರುದ್ಧ ಆರೋಪ ಮಾಡಿದ್ದಾರೆ.




ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

 


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮ