ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಬರ್ಬರ ಹತ್ಯೆ: ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೃತ್ಯ
ಹಾಸನ: ಹಸೆಮಣೆ ಏರಬೇಕಿದ್ದ KSISF ಪೊಲೀಸ್ ಕಾನ್ಸ್ಟೇಬಲ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ವಿ. ಹರೀಶ್(32) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹರೀಶ್ ಅವರನ್ನು ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾನೆ.
ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಹರೀಶ್ ಕಾರ್ಯ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನ. 11 ರಂದು ಹರೀಶ್ ಮದುವೆ ನಿಗದಿಯಾಗಿತ್ತು. ಮದುವೆಯ ಆಮಂತ್ರಣ ಪತ್ರಗಳನ್ನು ಹಂಚಿ ಮನೆಗೆ ತೆರಳುವಾಗ ನಿನ್ನೆ ರಾತ್ರಿ ದುದ್ದ ಗ್ರಾಮದ ಹೊರವಲಯದಲ್ಲಿ ಹರೀಶ್ ನನ್ನು ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.