LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿರಿಯೂರು ತಾಲ್ಲೂಕಿನ ಕಸಬ ಹೋಬಳಿಯ ಗ್ರಾಮ ಸಹಾಯಕರ ಹುದ್ದೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಸಬ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಗ್ರಾಮ ಸಹಾಯಕ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗದಿಯಾಗುವಂತಹ ಗೌರವಧನ ಪಾವತಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ  ಸಂದರ್ಶನ ನಡೆಸಿ ನೇಮಕಾತಿಗೆ ಕ್ರಮವಹಿಸಲಾಗುವುದು.

ಅರ್ಹತೆಗಳು: ನಿಗದಿತ ನಮೂನೆ-1ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷಗಳು ಪೂರ್ಣಗೊಂಡಿರಬೇಕು. ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸುವುದು. ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಲಗತ್ತಿಸುವುದು. ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆAಬುವ ಬಗ್ಗೆ ದಾಖಲೆ ಲಗತ್ತಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಮೊಕದ್ದಮೆ ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಹಶೀಲ್ದಾರ್ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ