ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ..!
ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.ಹಿರಿಯ ಪತ್ರಕರ್ತರದ ಅರ್ಜುನ್ ದೇವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಂಡಿದ್ದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.