LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆಚ್‌ಡಿಕೆಗೆ ‘ಕರಿಯಣ್ಣ’ ಎಂದ ಜಮೀರ್ ಅಹ್ಮದ್ ಕ್ಷಮೆಯಾಚನೆ!

ನಾನು ಮತ್ತು ಕುಮಾರಸ್ವಾಮಿ ಅವರು ಎಷ್ಟು ಆತ್ಮೀಯರು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. 24 ಗಂಟೆಯಲ್ಲಿ 16 ಗಂಟೆ ಇಬ್ಬರು ಜೊತೆಯಲಿರುತ್ತಿದ್ದೆವು. ಆಗ ಅವರು ಪ್ರೀತಿಯಿಂದ ನನಗೆ ಕುಳ್ಳ ಅನ್ನುತ್ತಿದ್ದರು, ನಾನು ಅವರಿಗೆ ಕರಿಯಣ್ಣ ಎನ್ನುತ್ತಿದ್ದೆ. ಕರಿಯಣ್ಣ ಎಂದು ಬಹಳಷ್ಟು ಬಾರಿ ಕರೆದಿದ್ದೇನೆ. ಚುನಾವಣೆ ಹಿನ್ನೆಲೆ ವಿವಾದ ಸೃಷ್ಟಿಯಾಗಿದೆ ಅಷ್ಟೇ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಸಚಿವ ಜಮೀರ್‌ ಅಹ್ಮದ್‌ ತಿಳಿಸಿದರು.

ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಕುಟುಂಬವನ್ನು ಕೊಂಡುಕೊಳ್ಳುತ್ತೇನೆ ಎಂದು ಹೇಳಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ”ಯಾರಾದರು ದೇವೇಗೌಡರ ಕುಟುಂಬವನ್ನು ಕೊಂಡುಕೊಳ್ಳಲು ಸಾಧ್ಯವೇ?. ನನಗೆ ದೇವೇಗೌಡರ ಮೇಲೆ ಬಹಳ ಗೌರವವಿದೆ. ಈ ಹಿಂದೆ ಚುನಾವಣೆಯಲ್ಲಿ ಮುಸ್ಲಿಂ ಮತಗಳನ್ನು ಖರೀದಿ ಮಾಡುತ್ತೇನೆ ಎಂದಿದ್ದರು. ಆ ವಿಚಾರವನ್ನು ಉಲ್ಲೇಖಿಸಿ ನಾನು ಹೇಳಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ನ.19 ರಂದು ವಕ್ಫ್ ಬೋರ್ಡ್ ಚುನಾವಣೆ ಇದೆ. ಈ ಹಿನ್ನೆಲೆ ಇಂದು ಸಭೆ ಕರೆದಿದ್ದೇವೆ. ಮತದಾರರು ಮಾತ್ರ ಭಾಗಿಯಾಗಿದ್ದಾರೆ. ವಕ್ಫ್ ಜಮೀನಿನ ವಿವಾದ ಇಲ್ಲಿ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಬಸ್‌ ಮಾಲೀಕ, ಡ್ರೈವರ್‌ ಅಲ್ಲ: ಬಸ್‌ ಡ್ರೈವರ್ನನ್ನು ಕರೆದುಕೊಂಡು ಬಂದು ಎಂಎಲ್ಎ ಮಾಡಿದವರು ದೇವೇಗೌಡರು ಎಂಬ ನಾಗಮಂಗಲದ ಮಾಜಿ ಶಾಸಕ ಸುರೇಶ್‌ ಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಬಸ್‌ ಡ್ರೈವರ್‌ ಅಲ್ಲ, ಬಸ್‌ ಮಾಲೀಕ. ನಮ್ಮ ತಾತನ ಕಾಲದಿಂದಲೂ ನಾವು ಬಸ್‌ ಮಾಲೀಕರು. ಕುಮಾರ ಸ್ವಾಮಿಯನ್ನು ಸಿಎಂ ಮಾಡಲು, ರಾಜ್ಯಪಾಲರ ಬಳಿ ಎಂಎಲ್ಎಗಳನ್ನು ಕರೆದುಕೊಂಡು ಹೋಗುವಾಗ ನಾನು ಬಸ್‌ ಡ್ರೈವರ್‌ ಆಗಿದ್ದೆ ಅಷ್ಟೇ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!ಚಿತ್ರದುರ್ಗ : ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ.!ಒಳ ಮೀಸಲಾತಿ: ಛಲವಾದಿ ಜನಾಂಗದ ನಿಖರವಾದ ಸಂಖ್ಯೆ ಇಲ್ಲ.! ಹೆಚ್.ಸಿ.ನಿರಂಜನಮೂರ್ತಿ