LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆಚ್‌ಡಿಕೆ, ರೆಡ್ಡಿ, ಇತರರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ,ಮಾಜಿ ಸಚಿವ ಮುರುಗೇ ಶ್ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಮೇಲಿನ ಪ್ರಕರಣದಲ್ಲೂ ಪ್ರಾಸಿಕ್ಯೂಷನ್‌ ಅನುಮತಿ ನೀ ಡುವಂತೆ ಆಗ್ರಹಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಶನಿವಾರ ಮನವಿ ಸಲ್ಲಿಸಿತು.

ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಿಂದ ರಾಜಭವನದವರೆಗೆ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಕಾಲ್ನಡಿಗೆಯಲ್ಲಿ ತೆರಳಿದರು.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀ ಡುವಂತೆ ರಾಜ್ಯಪಾಲರಿಗೆ ನೀ ಡಿದ ಮನವಿಯಲ್ಲಿ ಕಾಂಗ್ರೆಸ್ ಒತ್ತಾಯಿಸಿದೆ.

ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಯಾರೊ ದೂರು ಕೊಟ್ಟರೆಂದು ಮುಖ್ಯಮಂತ್ರಿ ವಿರುದ್ದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಆದರೆ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ಪ್ರಾಸಿಕ್ಯೂಷನ್‌ ಅವರು ಅನುಮತಿ ಕೊಡುತ್ತಿಲ್ಲ. ರಾಜಭವನ ರಾಜಕೀಯ ಭವನ ಆಗಬಾರದು. ಸಂವಿಧಾನದಡಿ ರಚನೆಯಾದ ಪೀಠ ರಾಜ್ಯಪಾಲರದ್ದು. ಇಂತಹ ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗಬಾರದು. ನ್ಯಾಯಸಮ್ಮತವಾಗಿ ಈ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಕೊಡಿ ಎಂ ದು ಮನವಿಮಾಡಿದ್ದೇವೆ ಎಂದರು.

ಎಚ್.ಡಿ. ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ, ನಿರಾಣಿ ಮೇ ಲಿನ ಪ್ರಾಸಿಕ್ಯೂಷನ್ ಅರ್ಜಿ ಸಂಬಂ ಧ ನಮ್ಮ ಬಳಿ ಏನೂ ಇಲ್ಲ. ಎಲ್ಲ ವಿಲೇವಾರಿ ಮಾಡಿದ್ದೇವೆಂದು ರಾಜ್ಯಪಾಲರು ಹೇಳಿದರು ಎಂದು ತಿಳಿಸಿದರು.

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು CCB ಅಧಿಕಾರಿಗಳು ಸೇರಿ ಮೂವರ ಬಂಧನDelhi Election 2025 : 50 ಕ್ಷೇತ್ರಗಳಲ್ಲಿ ಬಿಜೆಪಿ ಲೀಡ್‌ AAP 19Delhi Election 2025 : ಬಹುಮತ ಸನಿಹಕ್ಕೆ ಬಿಜೆಪಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆಐಪಿಎಸ್ ಅಧಿಕಾರಿ ಅರಿಬಾ ನೋಮನ್ ಯಶಸ್ಸಿನ ಕಥೆ