LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೈದರಾಬಾದ್ -ಕರ್ನಾಟಕ ಪ್ರದೇಶದ ನೌಕರರನ್ನು ಹೊರ ಜಿಲ್ಲೆಗಳಿಗೆ ವರ್ಗಾವಣೆಮಾಡಲು ಯಾವುದೇ ನಿರ್ಭಂದವಿಲ್ಲ: ಹೈಕೋರ್ಟ್ ಆದೇಶ.!

 

ಬೆಂಗಳೂರು: ಹೈದರಾಬಾದ್ -ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಮೀಸಲಾತಿ ಅಡಿ ನೇಮಕವಾದ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೈದರಾಬಾದ್ ಕರ್ನಾಟಕ ಪ್ರದೇಶದಿಂದ ಹೊರ ಭಾಗಗಳಿಗೆ ವರ್ಗಾವಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ಹೈದರಾಬಾದ್ -ಕರ್ನಾಟಕ ಪ್ರದೇಶ ಮೀಸಲಾತಿ ಅಡಿಯಲ್ಲಿ ನೇಮಕವಾಗಿದ್ದ ಸಬ್ ರಿಜಿಸ್ಟ್ರಾರ್ ಎನ್. ಶ್ರೀಕಾಂತ್ ಅವರನ್ನು ವರ್ಗಾವಣೆ ಮಾಡಿದ ಸರ್ಕಾರದ ಕ್ರಮವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಎತ್ತಿ ಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಮತ್ತೊಬ್ಬ ಸಬ್ ರಿಜಿಸ್ಟ್ರಾರ್ ಎಸ್. ನಂದೀಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಹೈದರಾಬಾದ್ -ಕರ್ನಾಟಕ ವ್ಯಾಪ್ತಿ ವರ್ಗಾವಣೆಗೆ ನಿರ್ಬಂಧವಿಲ್ಲ ಎಂದು ಆದೇಶ ನೀಡಿದೆ.

ಕರ್ನಾಟಕ ಸಾರ್ವಜನಿಕ ಉದ್ಯೋಗ(ಹೈದರಾಬಾದ್ -ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲು) ಆದೇಶ 2013ರಲ್ಲಿ ಹೈದರಾಬಾದ್- ಕರ್ನಾಟಕ ಮೀಸಲು ಅಡಿಯಲ್ಲಿ ನೇಮಕವಾದವರನ್ನು ಹೊರ ವ್ಯಾಪ್ತಿಗೆ ವರ್ಗಾವಣೆ ಮಾಡಲು ಸಂಬಂಧಿಸಿದಂತೆ ಯಾವುದೇ ನಿರ್ಬಂಧವಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಹೊರ ಪ್ರದೇಶಕ್ಕೆ ವರ್ಗಾವಣೆ ಮಾಡಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೆ. 5ರಂದು ದೆಹಲಿ ಚುನಾವಣೆ - ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ಭರದ ಪ್ರಚಾರವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'