LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೈನುಗಾರಿಕೆ: ರೈತ ಮಹಿಳೆಯರಿಗಿಲ್ಲಿದೆ ಖುಷಿ ಸಿಗುವ ಸುದ್ದಿ.!

 

ಚಿತ್ರದುರ್ಗ: 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡುವ ಯೋಜನೆ ಕಾರ್ಯಕ್ರಮ ಅನುಮೋದನೆಯಾಗಿದೆ.

ಸರ್ಕಾರದಿಂದ ಅನುಮೋದನೆಯಾಗಿರುವಂತೆ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯನ್ವಯ ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕುವಾರು ಗುರಿ ನಿಗಧಿಪಡಿಸಲಾಗಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸಾಲ ಪಡೆದಿರುವ ಅರ್ಹ ಫಲಾನುಭವಿಗಳು ಅಗತ್ಯ ಸೂಕ್ತ ದಾಖಲಾತಿಗಳೊಂದಿಗೆ ಆಯಾ ವ್ಯಾಪ್ತಿಯ ಸ್ಥಳೀಯ ಪಶುಚಿಕಿತ್ಸಾಲಯ ಪಶುವೈದ್ಯಾಧಿಕಾರಿ  ಅವರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕಿನ ಪಶುಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ದೂರವಾಣಿ ಸಂಖ್ಯೆ 948294311, ಚಳ್ಳಕೆರೆ 9448816499, ಹೊಳಲ್ಕೆರೆ 8073900950, ಹೊಸದುರ್ಗ 9945298407, ಹಿರಿಯೂರು 9483451044 ಹಾಗೂ ಮೊಳಕಾಲ್ಮುರು 900964820 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ.! ಬೋಸರಾಜು.!ಫೆ. 13 ರಿಂದ 15ರವರೆಗೆ ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವ.!ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು