LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೈಪ್ರೊಫೈಲ್​ ಹನಿಟ್ರ್ಯಾಪ್ ಸುಂದರಿಯನ್ನು ಖೆಡ್ಡಾಗೆ ಬೀಳಿಸಿದ ಬೆಂಗಳೂರು ಪೊಲೀಸರು..!​

ಹೈ ಪ್ರೊಫೈಲ್ ಹನಿಟ್ರ್ಯಾಪ್ ಸುಂದರಿಯನ್ನು ಬೆಂಗಳೂರಿನ ಮಹದೇವಪುರ  ಪೊಲೀಸರು ಖೆಡ್ಡಾಕ್ಕೆ ಬೀಳಿಸಿದ್ದಾರೆ.

ಬೆಂಗಳೂರು: ಹೈ ಪ್ರೊಫೈಲ್ ಹನಿಟ್ರ್ಯಾಪ್ ಸುಂದರಿಯನ್ನು ಬೆಂಗಳೂರಿನ ಮಹದೇವಪುರ  ಪೊಲೀಸರು ಖೆಡ್ಡಾಕ್ಕೆ ಬೀಳಿಸಿದ್ದಾರೆ.

ಮಧ್ಯಪ್ರದೇಶದ ಇಂದೋರ್​ನಲ್ಲಿ ಹನಿಟ್ರ್ಯಾಪ್ ಕಿಂಗ್ ಪಿನ್ ಎಂದೇ ಕುಖ್ಯಾತಿಗೊಂಡು ಕೆಲವು ತಿಂಗಳುಗಳಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಕಳ್ಳತನ ಪ್ರಕರಣದಲ್ಲಿ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಆರತಿ ದಯಾಳ್ ಬಂಧಿತ ಆರೋಪಿಯಾಗಿದ್ದು ಕಳ್ಳತನ ಮಾಡಿದ‌ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಜಯವಾಡದಲ್ಲಿ ಈಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.


ರಾಜಕೀಯ ನಾಯಕರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್​ ಮೂಲಕ ವಂಚಿಸಿದ್ದ ಪ್ರಕರಣದಲ್ಲಿ ಇವಳು ಕಿಂಗ್​ ಪಿನ್​ ಎಂಬ ಆರೋಪ ಕೇಳಿಬಂದಿದೆ.

ರಾಜಕೀಯ ಮುಖಂಡರನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಳು ಎಂಬ ಆರೋಪಗಳು ಈಕೆಯ ಮೇಲಿದ್ದವು.

ಪುರಸಭೆಯ ಇಂಜಿನಿಯರ್​ವೊಬ್ಬರು ಹನಿಟ್ರ್ಯಾಪ್​ಗೆ ಸಿಲುಕಿಸಿ ತಮಗೆ 3 ಕೋಟಿಗೆ ಬೇಡಿಕೆಯಿಟ್ಟಿದ್ದಳು‌ ಎಂದು ಆರತಿ ವಿರುದ್ಧ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು 2019ರಲ್ಲಿ ಬಂಧಿಸಲಾಗಿತ್ತು.‌ ಮಧ್ಯಪ್ರದೇಶ ಹನಿಟ್ರ್ಯಾಪ್​ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನಕ್ಕೆ‌ ಕಾರಣವಾಗಿತ್ತು.

2020 ರಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರತಿ ಕೆಲ ತಿಂಗಳುಗಳಿಂದ ನಾಪತ್ತೆಯಾಗಿದ್ದಳು.

ಈ ಹಿನ್ನೆಲೆಯಲ್ಲಿ ಆರತಿ ಪತ್ತೆಗೆ ಹೈಕೋರ್ಟ್ ಸೂಚಿಸಿತ್ತು. ಆರತಿ ಕಳೆದ ಒಂದು ತಿಂಗಳ ಹಿಂದಷ್ಟೇ ಬೆಂಗಳೂರು ನಗರಕ್ಕೆ ಬಂದಿದ್ದಳು. ಪಿಜಿಯೊಂದರಲ್ಲಿ ವಾಸವಾಗಿದ್ದ ವೇಳೆ ರೂಮ್​ಮೇಟ್ ​ಳ ಚಿನ್ನದ ಆಭರಣ ಕದ್ದು ಎಸ್ಕೇಪ್‌ ಆಗಿದ್ದಳು.

ಈ ಸಂಬಂಧ ಮಹದೇವಪುರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌

ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ವಿಚಾರಣೆಗೊಳಪಡಿಸಿದಾಗ ಆಕೆ ವಿರುದ್ಧ ಇಂದೋರ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಗೊತ್ತಾಗಿದೆ.

ಸೋನು, ಸಮಂತ, ಆರತಿ ಅಗರವಾಲ್ ಸೇರಿ ವಿವಿಧ ಹೆಸರುಗಳಿಂದ ಗುರುತಿಸಿಕೊಂಡಿದ್ದ ಈಕೆಯನ್ನು ಕಳ್ಳತನ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!