LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸ ಕಾನೂನುಗಳ ಜಾರಿ ಬಗ್ಗೆ ಪೊಲೀಸರಿಗೆ, ಅಧಿಕಾರಿಗಳಿಗೆ ತರಬೇತಿ ಕೊಟ್ಟಿದ್ದೇವೆ - ಪರಮೇಶ್ವರ್‌

ಬೆಂಗಳೂರು: ಕಾನ್‌ಸ್ಟೇಬಲ್‌ನಿಂದ ಹಿಡಿದು ಅಧಿಕಾರಿಗಳವರೆಗೂ ಹೊಸ ಅಪರಾಧ ಕಾನೂನಿನ ಬಗ್ಗೆ ತರಬೇತಿ ನೀಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಇಂದಿನಿಂದ 3 ದೇಶಿ ಕಾನೂನು ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಅಪ್ಲಿಕೇಶನ್‌ ಸಿದ್ಧಪಡಿಸಿದ್ದೇವೆ. ಪೊಲೀಸರಿಗೆ ಹೊಂದಾಣಿಕೆ ಆಗುವವರೆಗೂ ಈ ಅಪ್ಲಿಕೇಶನ್‌ ನೋಡಿಕೊಂಡು ಕೆಲಸ ಮಾಡಬಹುದು ಎಂದು ತಿಳಿಸಿದರು.

ಇದು ಒಂದು ರೀತಿಯಲ್ಲಿ ಟೆಸ್ಟಿಂಗ್ ಸಮಯ. ಇಡೀ ದೇಶದಲ್ಲಿ ಜಾರಿಯಾಗಿದೆ. ಪ್ರತಿಕ್ರಿಯೆ ನೋಡಿಕೊಂಡು ಸರ್ಕಾರ ಮುಂದೆ ಕೆಲ ಪರಿಷ್ಕರಣೆ ಮಾಡಬಹುದು. ಇವತ್ತಿನಿಂದ ಯಾವೆಲ್ಲ ಪ್ರಕರಣಗಳು ದಾಖಲಾಗುತ್ತದೋ ಅವೆಲ್ಲವೂ ಈ ಹೊಸ ಕಾನೂನಿನ ಅಡಿ ದಾಖಲಾಗಲಿದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST