LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

₹ 25 ಕೋಟಿ ಕೊಡ್ತೀನಿ ಆತ್ಮಹತ್ಯೆ ಮಾಡಿಕೊಳ್ತಿಯಾ?: ಡಿಕೆಶಿಗೆ ಶಾಸಕ ಬಸನಗೌಡ ಸವಾಲು

ರಾಯಚೂರು, ಸೆಪ್ಟೆಂಬರ್ 09: ‘₹5 ಲಕ್ಷ ಸಿಗುವ ಕಾರಣಕ್ಕೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ಹೇಳಿಕೆ ನೀಡಿರುವುದು ಖಂಡನೀಯ. ನಾನು ಆ ಮಂತ್ರಿಗೆ ₹5 ಕೋಟಿ ಕೊಡ್ತೀನಿ ಆತ್ಮಹತ್ಯೆ ಮಾಡಿಕೊಳ್ತಾರಾ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸವಾಲು ಹಾಕಿದರು.

ಕಾಂಗ್ರೆಸ್‌ ನಾಯಕರು ಬೇಜಾಬ್ದಾರಿಯಿಂದ ಮಾತನಾಡಿದ್ದಾರೆ. ₹ 5 ಲಕ್ಷಕ್ಕೆ ಯಾರಾದರೂ ಆತ್ಮಹತ್ಯೆ ಮಾಡಿಕೊಳ್ತಾರಾ? ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ಇಲ್ಲಿ ಪ್ರತಿಕ್ರಿಯಿಸಿದರು.

ನಾನು ಡಿ.ಕೆ. ಶಿವಕುಮಾರ್‌ಗೂ ಚಾಲೆಂಜ್ ಮಾಡ್ತಿನಿ. ನೀನು ಬಹಳ ಶ್ರೀಮಂತ ಇದ್ದಿಯಾ. ನಿನಗೆ ₹25 ಕೋಟಿ ಕೊಡ್ತೀನಿ, ನೀನು ಆತ್ಮಹತ್ಯೆ ಮಾಡಿಕೊಳ್ತಿಯಾ? ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊ‌ ನೋಡೊಣ’ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

‘ಜೀವನದಲ್ಲಿ‌ ಇನ್ನು ಸುಧಾರಿಸಲು ಸಾಧ್ಯವಿಲ್ಲ ಎಂದು ಮನನೊಂದು ಕೊನೆಗೆ ದಾರಿ ಇಲ್ಲದೆ ರೈತ ಮತ್ತು ಆತನ ಕುಟುಂಬದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್‌ನವರು ಬಹಳ ಹಗುರವಾಗಿ ಮಾತನಾಡಿದ್ದಾರೆ. 135 ಸೀಟು ಬಂದ ಮೇಲೆ ಕಾಂಗ್ರೆಸ್‌ನವರಿಗೆ ಅಹಂಕಾರ ಬಂದಿದೆ. ಆಕಾಶಕ್ಕೆ ಏರಿದ್ದಾರೆ. ಇಂದಿರಾ ಗಾಂಧಿ ಅವರಂಥ ಸರ್ವಾಧಿಕಾರಿಗೇ ಪ್ರಜಾಪ್ರಭುತ್ವದಲ್ಲಿ ಉಳಿಯಲು ಆಗಲಿಲ್ಲ. ಇನ್ನು ಉಳಿದವರೇನು ಮಹಾ’ ಎಂದು ಟೀಕಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯು