E-PAPER
17 Nov 2026, 12:21:50 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

*₹8.04 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗೆ ಹೊಸ ರೂಪ-ರೋಬೋಟಿಕ್ ಮತ್ತು ಭಾಷಾ ಪ್ರಯೋಗಾಲಯ ಉದ್ಘಾಟನೆ*

5 ಕೋಟಿ ರೂ. ವೆಚ್ಚದಲ್ಲಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ

ಬೆಳಗಾವಿ-24: ನಗರದ ಕಾಕತಿವೇಸ್ ನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ(ಸರದಾರ ಪ್ರೌಢಶಾಲೆ)ಯ ಮೂಲಸೌಕರ್ಯ ಬಲಪಡಿಸುವುದರ ಜತೆಗೆ, ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರೋಬೋಟಿಕ್, ಭಾಷಾ ಹಾಗೂ ವರ್ಚುವಲ್ ಪ್ರಯೋಗಾಲಯಗಳನ್ನು ಶಾಸಕ ಆಸಿಫ್(ರಾಜು) ಸೇಠ್ ಅವರು ಶನಿವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ಪೈಕಿ ₹5 ಕೋಟಿ ವೆಚ್ಚದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ಕೂಡ ನೆರವೇರಿಸಲಾಯಿತು.

ನಂತರ ಮಾತನಾಡಿದ ಶಾಸಕ ಸೇಠ್ ಅವರು, ಶಾಸಕ ರಾಜು ಸೇಠ್ ಮಾತನಾಡಿ, "ತಾವು ಚುನಾಯಿತರಾದ ಆರಂಭದಲ್ಲೇ ಶಾಲೆಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳು ಶೌಚಾಲಯದ ಸಮಸ್ಯೆ ಹೇಳಿಕೊಂಡಿದ್ದರು. ಬಳಿಕ ತಕ್ಷಣವೇ ಶೌಚಾಲಯ ನಿರ್ಮಿಸಿ, ಶಾಲೆಯ ಅಭಿವೃದ್ಧಿಗೆ ನಿರಂತರವಾಗಿ ಗಮನಹರಿಸುತ್ತಿದ್ದೇನೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉತ್ತಮ ಅಂಕ ಗಳಿಸಿ ನಾಡಿಗೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು.

ರೋಬೋಟಿಕ್ಸ್, ಭಾಷಾ ಪ್ರಯೋಗಾಲಯ ಹಾಗೂ ಸ್ಮಾರ್ಟ್‌ ಸೌಲಭ್ಯಗಳು ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಮತ್ತು ಕೌಶಲಾಧಾರಿತ ಕಲಿಕೆಗೆ ಹೊಸ ಅವಕಾಶ ಕಲ್ಪಿಸಲಿವೆ. ಸರ್ಕಾರಿ ಶಾಲೆಯನ್ನು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸುವ ಪ್ರಯತ್ನಕ್ಕೆ ಈ ಯೋಜನೆ ಮತ್ತಷ್ಟು ಬಲ ತುಂಬಲಿದೆ ಎಂದು ಹೇಳಿದರು.

ಬೆಳಗಾವಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ₹8.04 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಯ ಸ್ಪರ್ಶ ನೀಡಲಾಗುತ್ತಿದೆ ಎಂದು ಶಾಸಕ ಸೇಠ್ ತಿಳಿಸಿದರು.

ಐದು ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕೊಠಡಿಗಳನ್ನು ನಿರ್ಮಿಸಲಾಗುವುದು. ಉಳಿದಂತೆ ₹3.04 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಸೌಲಭ್ಯ, ರೋಬೋಟಿಕ್ಸ್ ಹಾಗೂ ಭಾಷಾ ಪ್ರಯೋಗಾಲಯ, ವರ್ಕ್‌ಶಾಪ್‌ಗಳ ಉನ್ನತೀಕರಣ ಸೇರಿದಂತೆ ವಿವಿಧ ತಂತ್ರಜ್ಞಾನಾಧಾರಿತ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಮಲಗೌಡ ಪಾಟೀಲ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಉತ್ತಮ ಶಿಕ್ಷಣ ಪಡೆದು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂಬುದು ಸಚಿವ ಸತೀಶ್ ಜಾರಕಿಹೊಳಿ ಅವರ ಆಶಯವಾಗಿದೆ ಎಂದರು.

 

ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ, ಉಪ ಮಹಾಪೌರ ಹನುಮಂತ ಕೊಂಗಾಲಿ, ಬಿಇಒ ರವಿ ಭಜಂತ್ರಿ, ಸೇರಿದಂತೆ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪಾಲಕರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.