ವಿಜಯನಗರ(ಹೊಸಪೇಟೆ), ಡಿಸೆಂಬರ್.01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಸಂಘಗಳು ಹಾಗೂ ಎಂಆರ್‌ಡಬ್ಲೂ, ಯುಆರ್‌ಡಬ್ಲೂ, ವಿಆರ್‌ಡಬ್ಲೂ ನ ಸಹಯೋಗದಲ್ಲಿ ಡಿಸೆಂಬರ್.03 ರಂದು ಬೆಳಿಗ್ಗೆ 10:30 ಕ್ಕೆ, ನಗರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ವೇದಿಕೆ ಕಾರ್ಯಕ್ರಮದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಗೂ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರು ಭಾಗವಹಿಸಲಿದ್ದಾರೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ಉಪಸ್ಥಿತಿ ಇರಲಿದೆ .
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಶ್ರೀಪುಟ್ಟರಾಜ ಗವಾಯಿಗಳ ಭಾವಚಿತ್ರ ಮೆರವಣಿಗೆಯನ್ನು ನಗರದ ನೆಹರು ಕಾಲೋನಿಯ ಸಹಕಾರಿ ಕಲ್ಯಾಣ ಮಂಟಪದಿಂದ ವಾಲ್ಮೀಕಿ ವೃತ್ತ, ರಾಜ ವೀರಮದಕರಿ ವೃತ್ತ, ಉದ್ಯೋಗ ಪೆಟ್ರೋಲ್ ಬಂಕ್, ದರ್ಗಾ ಮಸೀದಿ, ಗಾಂಧಿ ವೃತ್ತ, ಕೇಂದ್ರ ಬಸ್ ನಿಲ್ದಾಣದ ಮಾರ್ಗವಾಗಿ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದವರಗೆ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.