1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ.! ಸಚಿವ ಕೃಷ್ಣ ಬೈರೇಗೌಡ.!
ಕಲಬುರಗಿ : ರಾಜ್ಯದಲ್ಲಿ ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ಕಲಬುರಗಿ ನಗರದಲ್ಲಿವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಕೂಡ ಭರ್ತಿ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.