ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ
ದಾವಣಗೆರೆ: ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಆಯೋಜಿಸಲಾಗಿದೆ.
ತರಬೇತಿಯು ಮೇ.02 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಏಪ್ರಿಲ್ 13 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ದಾವಣಗೆರೆರವರ ಕಛೇರಿಯಲ್ಲಿ/ ಇಲಾಖಾ ವೆಬ್‌ಸೈಟ್: www.horticulture.kar.nic.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 15 ರೊಳಗಾಗಿ ನಿಗದಿತ ಶುಲ್ಕದೊಂದಿಗೆ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ)/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192- 230049 ಸಂಪರ್ಕಿಸುವAತೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.