LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮೂಹಿಕ ಅತ್ಯಾಚಾರ ಆರೋಪ: 10 ಜನರ ಬಂಧನ

ದಾವಣಗೆರೆ,ಜೂ.09 : ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಬಳಿ 41 ವರ್ಷ ವಯಸ್ಸಿನ ಮಹಿಳೆಯೊಬ್ಬರ ಮೇಲೆ ಜೂನ್ 03 ರ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಸಂಬಂಧ ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಒಬ್ಬ ಬಾಲಕ ಸೇರಿ 10 ಜನ ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆಯ ನಗ್ನ ಚಿತ್ರಗಳು ಮತ್ತು ವಿಡಿಯೋಗಳನ್ನು ಆರೋಪಿಗಳು ಸೋಮವಾರ ರಾತ್ರಿ ಹರಿಬಿಟ್ಟಿದ್ದು, ಮನೆಯವರಿಗೆ ವಿಷಯ ಗೊತ್ತಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಮದ್ಯಪಾನ ಮಾಡಿದ್ದ ಗಂಡನೊಂದಿಗೆ ಜಗಳವಾಡಿದ್ದ ಮಹಿಳೆ ರಾತ್ರಿ 7.30 ರ ಸಮಯದಲ್ಲಿ ಪಕ್ಕದಲ್ಲೇ ಇರುವ ತವರೂರಿನತ್ತ ನಡೆದು ಹೋಗುವಾಗ ಯುವಕರ ಗುಂಪು ಸಹಾಯ ಮಾಡುವ ನೆಪದಲ್ಲಿ ಮಾತನಾಡಿಸಿ, ಕುಡಿಯಲು ತಂಪು ಪಾನೀಯ ನೀಡಿದೆ. ಪಾನೀಯ ಕುಡಿದ ತಕ್ಷಣ ಪ್ರಜ್ಞೆ ತಪ್ಪಿದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದೆ.
ಸಾಮೂಹಿಕ ಅತ್ಯಾಚಾರ, ವಿಡಿಯೊ ಚಿತ್ರೀಕರಣ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ 20 ರಿಂದ 30 ವರ್ಷ ವಯಸ್ಸಿನ ಯುವಕರಾದ ಚಟಾಕಿ ನಾಗರಾಜ, ಇಸ್ತ್ರೀ ನಾಗರಾಜ, ಮಧು, ಅರ್ಜುನ, ಬಸವಂತ, ಕುಂದೂರ ಮಾರುತಿ, ಮನು, ಜೋಗಿ ಸುನೀಲ ಹಾಗೂ ಪ್ರದೀಪ ಅವರನ್ನು ಬಂಸಿರುವ ಬಸವಾಪಟ್ಟಣ ಠಾಣೆಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಎಚ್.ಟಿ.ಶೇಖರ್, ಎಎಸ್‌ಪಿ ಪರಮೇಶ್ವರ ಹೆಗಡೆ, ಡಿವೈಎಸ್‌ಪಿ ರುದ್ರಪ್ಪ ಉಜ್ಜಿನಿಕೊಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST