LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಪಂ ಗೆ ಕ್ಷಯಮುಕ್ತ ಪ್ರಶಸ್ತಿ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ: ಶಾಸಕಿ ಈ.ಅನ್ನಪೂರ್ಣ






ಬಳ್ಳಾರಿ,ಮಾ.24

ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಹೇಳಿದರು.

‘ವಿಶ್ವ ಕ್ಷಯರೋಗ ದಿನಾಚರಣೆ-2025’ ರ ಅಂಗವಾಗಿ ‘ಹೌದು! ನಾವು ಕ್ಷಯವನ್ನು ಕೊನೆಗೊಳಿಸಬಹುದು' ಎಂಬ ಧ್ಯೇಯವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ವತಿಯಿಂದ ನಗರದ ಬಿಮ್ಸ್ ನ ವೈದ್ಯ ಭವನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 2024 ನೇ ಸಾಲಿಗೆ ಎಸ್‌ಟಿಇಪಿ ಕಾರ್ಯಕ್ರಮದಡಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷಯವು ಚಿಕ್ಕ ಮಕ್ಕಳಿನಿಂದ ಹಿರಿಯ ವಯಸ್ಸಿನವರಿಗೂ ಬಾಧಿಸುವಂತಹ ರೋಗವಾಗಿದೆ. ಹೆಚ್ಚಾಗಿ ಧೂಳಿನಿಂದ ಕೂಡಿದ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಸಹ ಬರಬಹುದಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಜನತೆಯು ಕ್ಷಯರೋಗದ ಕುರಿತು ಹೆಚ್ಚು ಕಾಳಜಿ ತೆಗೆದುಕೊಳ್ಳದೇ ಇರುವುದು ಕಂಡುಬರುತ್ತಿದ್ದು, ಈ ದಿಶೆಯಲ್ಲಿ ಸೂಕ್ತ ಜಾಗೃತಿ ನೀಡಬೇಕು. ಜೊತೆಗೆ ಕ್ಷಯರೋಗವನ್ನು ಸಕಾಲದಲ್ಲಿ ಗುರುತಿಸುವ ಕಾರ್ಯದಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಆಶಾಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ. ಹಾಗಾಗಿ ಕ್ಷಯಮುಕ್ತ ಬಳ್ಳಾರಿಯನ್ನಾಗಿ ಮಾಡುವ ಪ್ರಯತ್ನವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಕರೆ ನೀಡಿದರು.

ರಾಜ್ಯ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಉತ್ತಮ ಆರೋಗ್ಯ ಒದಗಿಸುವುದು ನಮ್ಮ ಸರ್ಕಾರದ ಕರ್ತವ್ಯವೂ ಆಗಿದೆ ಎಂದು ಹೇಳಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಕ್ಷಯರೋಗವು ಹಿಂದಿನ ಕಾಲದಲ್ಲಿ ಸಾಕಷ್ಟು ಪರಿಣಾಮ ಬೀರಿತ್ತು. ಪ್ರಸ್ತುತದಲ್ಲಿ ಆಧುನಿಕ ತಂತ್ರಜ್ಞಾನವುಳ್ಳ ಯಂತ್ರಗಳು ಲಭ್ಯವಿದ್ದು, ಸಕಾಲದಲ್ಲಿ ಗುರುತಿಸಿ ತ್ವರಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕ್ಷಯ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿವೆ. ಸಂಪೂರ್ಣವಾಗಿ ಕಡಿಮೆ ಮಾಡಲು ಸಾರ್ವಜನಿಕರು ಆರೋಗ್ಯ ಇಲಾಖೆಗೆ ಕೈಜೋಡಿಸಬೇಕು ಎಂದು ಹೇಳಿದರು.

ಕ್ಷಯ ಲಕ್ಷಣ ಕಂಡುಬAದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು. ಬಳಿಕ ಶೀಘ್ರವಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಕ್ಷಯವನ್ನು ತ್ವರಿತವಾಗಿ ಪತ್ತೆಹಚ್ಚಲು ಸಿಬಿನ್ಯಾಟ್ ಯಂತ್ರಗಳನ್ನು ಬಿಮ್ಸ್, ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹಾಗೂ ಟ್ರುನ್ಯಾಟ್ ಮಿಷನ್ ಗಳನ್ನು ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅನುಷ್ಠಾನ ಮಾಡಲಾಗಿದ್ದು, ರೋಗವನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಕಾರಿಯಾಗಿದ್ದು, ಚಿಕಿತ್ಸೆ ಪೂರ್ಣಗೊಂಡು ಗುಣಮುಖರಾಗುವ ಪ್ರಮಾಣ ಶೇ.85 ರಷ್ಟಿದ್ದು ರಾಜ್ಯಮಟ್ಟದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆಯು ಒಂದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2024 ಸಾಲಿಗೆ ಕ್ಷಯಮುಕ್ತ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಆ ವ್ಯಾಪ್ತಿಯ ವೈದ್ಯಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

*ಕ್ಷಯಮುಕ್ತ ಗ್ರಾಪಂ:*

ಬಳ್ಳಾರಿ ತಾಲ್ಲೂಕಿನ ಭೈರದೇವನಹಳ್ಳಿ, ರ್ರಗುಡಿ, ಸಂಗನಕಲ್ಲು, ಸಿರಿವಾರ ಮತ್ತು ಕರ್ಲಗುಂದಿ.

ಬಳಿಕ ಉತ್ತಮ ಸೇವೆ ಸಲ್ಲಿಸಿದ ವೈದ್ಯರು, ಕ್ಷೇತ್ರ ಸಿಬ್ಬಂದಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಂಘ ಸಂಸ್ಥೆಗಳಿಗೆ ಸನ್ಮಾನಿಸಲಾಯಿತು.

*ಗಮನಸೆಳೆದ ಜಾಗೃತಿ ಜಾಥಾ:*

ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಜಾಥಾವು ಗಮನ ಸೆಳೆಯಿತು. ವಿವಿಧ ಸಾಂಸ್ಕೃತಿ ಕಲಾತಂಡಗಳನ್ನೊಳಗೊAಡ ಜಾಥಾದಲ್ಲಿ ಆಶಾ-ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿ ಘೋಷಣೆ ಕೂಗುವ ಮೂಲಕ ಜಾಗೃತಿ ಮೂಡಿಸಲಾಯಿತು. ಕ್ಷಯರೋಗ ಜಾಗೃತಿ ಮೂಡಿಸುವ ಮಾಹಿತಿ ಫಲಕಗಳು ರಾರಾಜಿಸಿದವು.

ಜಾಗೃತಿ ಜಾಥಾವು ನಗರದ ಕನಕದಾಸರ ವೃತ್ತದ ಕೆಎಂಎಫ್ ಮುಂಭಾಗದಿAದ ಆರಂಭಗೊAಡು ಇನ್ ಫ್ಯಾಂಟರಿ ರಸ್ತೆಯ ಮೂಲಕ ಬಳ್ಳಾರಿ ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ದ ವೈದೈ ಭವನದ ಸಭಾಂಗಣದವರೆಗೆ ಸಾಗಿ ಸಮಾರೋಪಗೊಂಡಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್ ಸೇರಿದಂತೆ ವಿವಿಧ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಟಿಬಿ ವಿಭಾಗದ ಸಿಬ್ಬಂದಿ, ಟಿಬಿ ಚಾಂಪಿಯನ್ಸ್ ಹಾಗೂ ಬಿಮ್ಸ್ ನ ತರಬೇತುದಾರ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು