LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 6ರಂದು ಜನೋಪಕಾರಿ ಶ್ರೀದೊಡ್ಡಣ್ಣ ಶೆಟ್ಟಿರವರ 103ನೇ ಆರಾಧನಾ ಮಹೋತ್ಸವ

ಬೆಂಗಳೂರು: ಯಜಮಾನ್ ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರವರ 103ನೇ ಆರಾಧನಾ ಮಹೋತ್ಸವ ಆಗಸ್ಟ್ 6 ರಂದು ನಡೆಯಲಿದೆ ಎಂದು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರಾದ ಸುರೇಶ್ ಅವರು ತಿಳಿಸಿದರು.



ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದವರು, ಶ್ರೀ ದೊಡ್ಡಣ್ಣ ಶೆಟ್ಟರವರ ಧಾರ್ಮಿಕ ಕಾರ್ಯ, ಬಡವರಿಗೆ ಉಚಿತ ಶಿಕ್ಷಣ, ಹಾಗೂ,ಉಚಿತ ಊಟ,ವಸತಿ ನೀಡಿದ ಮಹಾನ್ ವ್ಯಕ್ತಿತ್ವದವರು,ಮೈಸೂರು ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜೊತೆಯಲ್ಲಿ ಯಜಮಾನ್ ಜನೋಪಕಾರಿ ದೊಡ್ಡಣ್ಣ ಶೆಟ್ಟರವರು ಉತ್ತಮ ಒಡನಾಟವಿತ್ತು. ದೊಡ್ಡಣ್ಣ ಶೆಟ್ಟರವರ ಸಮಾಜ ಸೇವೆಯನ್ನು ಗುರುತಿಸಿ ಇವರಿಗೆ ಜನೋಪಕಾರಿ ಎಂಬ ಬಿರುದು ಕೊಟ್ಟು ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ.ಮಹಾರಾಜರು ನೀಡಿದ 5.1/5 ಎಕರೆ ಜಾಗದಲ್ಲಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಧರ್ಮ ಸಂಸ್ಥೆ ಸ್ಥಾಪಿಸಿದರು.

1905ರಲ್ಲಿ ಕಲಾಸಿಪಾಳ್ಯದಲ್ಲಿ ಸಭಾಂಗಣ ಕಟ್ಟಡ ನಿರ್ಮಾಣ ಮಾಡಿದರು.ದೊಡ್ಡಣ್ಣ ಶೆಟ್ಟರವರ ಕೆಲಸ ಕಾರ್ಯಗಳು ಮುಂದಿನ ಪೀಳಿಗೆಗೆ ತಿಳಿಯಬೇಕು, ಅವರ ಹಾಕಿಕೊಟ್ಟ ಮಾರ್ಗದರ್ಶನ ಸಾಗಬೇಕು ಎಂಬುದು ಧರ್ಮ ಸಂಸ್ಥೆಯ ಉದ್ದೇಶವಾಗಿದೆ.ಆಗಸ್ಚ್ 6ರಂದು ಶ್ರೀ ದೊಡ್ಡಣ್ಣ ಶೆಟ್ಟರವರ 103ನೇ ಆರಾಧನಾ ಮಹೋತ್ಸವವನ್ನು ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟಿರ ಬಯಲು ರಂಗಮಂದಿರದಲ್ಲಿ ಬೆಳಗ್ಗೆ 6 ಗಂಟೆಗೆ ಜರುಗಲಿದೆ.

ಪತ್ರಿಕಾಗೋಷ್ಠಿಯಲ್ಲಿ  ಅಧ್ಯಕ್ಷರಾದ ಸುರೇಶ್ ಎಸ್. ಮತ್ತು ಆಡಳಿತ ಮಂಡಳಿಯ ಸದಸ್ಯರಾದ ವಿನೋದ್ ಎಂ.ಜಿ., ವಿ.ಎಸ್.ಮಂಜುನಾಥ್, ನಿರಂಜನ್ ಗಾಣಿಗ. ಎನ್,ಮುನಿಚೆಟ್ಟಿ.ವಿ , ಶ್ರೀಮತಿ ಉಮಾದೇವಿ ಜಿ.ಎ,ಸ್ಪಪ್ನಚಂದ್ರಶೆಟ್ಟಿ, ರಾಜಣ್ಣ ಎಂ.ಸಿ,ಷಹ ಸಂಜಯ್, ಶ್ರೀಮತಿ ಕೃಷ್ಣವೇಣಿ ಡಿ.ಸಿ ರವರು ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು,ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ರವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯನ್ನು, ಸಂಸದರಾದ  ತೇಜಸ್ವಿಸೂರ್ಯರವರು, ಶಾಸಕರಾದ ಉದಯ ಗರುಡಾಚಾರ್ ಸಿ.ರವರು ಲಕ್ಷ್ಮೀನರಸಿಂಹಸ್ವಾಮಿ ಧರ್ಮ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಸಮುದಾಯದ ಎಲ್ಲಾ ಸಂಘ ಸಂಸ್ಥೆಯವರು ಹಿರಿಯ ಮುಖಂಡರು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಇನ್ನು ಇದೇ ವೇಳೆ ಶ್ರೀ ದೊಡ್ಡಣ್ಣ ಶೆಟ್ಟ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿದ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ