E-PAPER
17 Nov 2026, 05:18:46 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೆಪ್ಟೆಂಬರ್‌ 30ರ (ಇಂದು)ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಿಗೆ (ಭೇಟಿ)ಸಮೀಕ್ಷೆ

ಬೆಂಗಳೂರ-30:ಉತ್ತರ ಕರ್ನಾಟಕದಲ್ಲಿ CM ವೈಮಾನಿಕ ಸಮೀಕ್ಷೆ . ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸೆಪ್ಟೆಂಬರ್‌ 30ರ(ಇಂದು)ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಿದ್ದಾರೆ.

ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ, ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಧ್ಯಾಹ್ನ 2 ಗಂಟೆ ವೇಳೆಗೆ ಸಮೀಕ್ಷೆ ಪೂರ್ಣಗೊಳಿಸಿ, ಕಲಬುರಗಿ ನಗರದ ಐವಾನ್‌-ಇ-ಷಾಹಿ ವಸತಿ ಗೃಹಕ್ಕೆ ಆಗಮಿಸಲಿದ್ದಾರೆ. ಭೋಜನ ವಿರಾಮದ ಬಳಿಕ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ, ನಾಲ್ಕೂ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ಕೈಗೊಂಡಿರುವ, ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಳೆ ಹಾನಿ ಪರಿಹಾರ ಕುರಿತು ಮಾಹಿತಿ ನೀಡಲಿದ್ದಾರೆ.

ಕಳೆದೆರಡು ದಿನಗಳಿಗೆ ಹೋಲಿಸಿದರೆ ನೆರೆಯ ಮಹಾರಾಷ್ಟ್ರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಮತ್ತು ನೆರೆ ಕಡಿಮೆಯಾಗಿದೆ. ಆದರೆ, ಜನರ ಬವಣೆ ಮಾತ್ರ ಕಡಿಮೆಯಾಗಿಲ್ಲ. ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್‌ ಹಾಗೂ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಜನರ ಸಂಕಷ್ಟ ಮುಂದುವರಿದೆ.

ಭೀಮಾ ನದಿಯ ಒಳಹರಿವು 5.10 ಲಕ್ಷ ಕ್ಯೂಸೆಕ್‌ನಿಂದ 4.75 ಲಕ್ಷ ಕ್ಯೂಸೆಕ್‌ಗೆ ಇಳಿದಿದ್ದರೂ, ಭೀಮಾ ತೀರದ ಗ್ರಾಮಗಳಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ. ಸುರಕ್ಷಿತ ಸ್ಥಳಗಳಿಗೆ ಜನರನ್ನು ಕಳುಹಿಸುವ ಕೆಲಸ ಈಗಲೂ ಮುಂದುವರಿದಿದೆ.

ಅನೇಕ ಮನೆಗಳು ಭಾಗಶಃ ನೀರಲ್ಲಿ ಮುಳುಗಿದ್ದರಿಂದ ಹಾಗೂ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ, ಕೆಲವರು ಮನೆ ಮಾಳಿಗೆ ಮೇಲೆ ಕಾಲ ಕಳೆಯುತ್ತಿದ್ದಾರೆ. ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹೆಚ್ಚಾಗಿದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ರಕ್ಷಣಾ ಸಿಬ್ಬಂದಿ, ಪರಿಹಾರ ಕಾರ್ಯಾಚರಣೆಗಳಲ್ಲಿ ತೊಡಗಿದ್ದಾರೆ.

(ವರದಿ: ಸ್ಟೀಫನ್ ಜೇಮ್ಸ್)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ