LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

10 ನೇ ತರಗತಿ ಪಾಸಾದವರು ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!

ಬೆಂ.ಗ್ರಾ.ಜಿಲ್ಲೆ: ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿ ಕಾರ್ಯಕ್ರಮಗಳು: ಫುಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ (10ನೇ ತರಗತಿ ವಿದ್ಯಾರ್ಹತೆ), ರೂಮ್ ಅಟೇಂಡೆಟ್ (5ನೇ ತರಗತಿ ವಿದ್ಯಾರ್ಹತೆ), ಫ್ರಂಟ್ ಆಫೀಸ್ ಅಸೋಸಿಯೇಟ್ (12ನೇ ತರಗತಿ ವಿದ್ಯಾರ್ಹತೆ), ಮಲ್ಟಿ ಕ್ಯೂಸಿನ್ ಕುಕ್ (8ನೇ ತರಗತಿ ವಿದ್ಯಾರ್ಹತೆ) ತರಬೇತಿಗಾಗಿ 20 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಡಿಸೆಂಬರ್ 28 ರ ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಕೊಠಡಿ ಸಂ: 09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 08022040633 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು'ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ'- ಸಿಎಂದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆ