LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 12 ನಕ್ಸಲರ ಹತ್ಯೆ

ಭುವನೇಶ್ವರ್ : ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.

ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಒಬ್ಬ ಕೋಬ್ರಾ ಜವಾನ್ ಗಾಯಗೊಂಡಿದ್ದರು ಎಂದು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಛತ್ತೀಸ್‌ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಯ ಭದ್ರತಾ ಸಿಬ್ಬಂದಿ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 10 ತಂಡಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.

ಒಡಿಶಾದಲ್ಲಿ ನಕ್ಸಲರ ಮುಖ್ಯಸ್ಥನಾಗಿದ್ದ, ಜೈರಾಮ್ ಅಲಿಯಾಸ್ ಚಲಪತಿ ಕೂಡ ಹತ್ಯೆಯಾದವರಲ್ಲಿ ಸೇರಿದ್ದಾನೆ ಎನ್ನಲಾಗಿದೆ. ಈತನ ಪತ್ತೆಗೆ ಸರ್ಕಾರ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಅಲ್ಲದೆ, ಈ ಎನ್‌ಕೌಂಟರ್‌ನಲ್ಲಿ ಕುಖ್ಯಾತ ನಕ್ಸಲರಾದ ಮನೋಜ್ ಮತ್ತು ಗುಡ್ಡು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕುಳರಿಘಾಟ್ ಮೀಸಲು ಅರಣ್ಯದಲ್ಲಿ ನಕ್ಸಲರು ಇರುವ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಜನವರಿ 19 ರ ರಾತ್ರಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಎನ್‌ಕೌಂಟರ್ ನಡೆದ ಸ್ಥಳದಿಂದ ಆಟೋ-ಲೋಡಿಂಗ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಬಂದೂಕುಗಳು, ಮದ್ದುಗುಂಡುಗಳು ಮತ್ತು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾವೋವಾದಿಗಳ ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST