LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ) ವಕ್ಫ್ ಸಂಸ್ಥೆಯ ಕಾರ್ಯಾಕಾರಿ ಸಮಿತಿಗೆ ಚುನಾವಣೆ





ಬಳ್ಳಾರಿ,ನ.04

ಸಿರುಗುಪ್ಪ ಪಟ್ಟಣದ ವಕ್ಫ್ ಸಂಸ್ಥೆಯಾದ ಕೌಲ್ ಬಜಾರ್ ವ್ಯಾಪ್ತಿಯ ವಕ್ಫ್ ಸಂಸ್ಥೆ ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ)ವಕ್ಫ್ ಸಂಸ್ಥೆಗೆ ಹೊಸ ಸಮಿತಿ ರಚಿಸುವ ನಿಮಿತ್ತ ಚುನಾವಣಾ ಪ್ರಕ್ರಿಯೆಯು ನ.04 ರಿಂದ 22 ರವರೆಗೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಚುನಾವಣಾ ನಾಮಪತ್ರವನ್ನು ನ.04 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 02.30 ಗಂಟೆಯವರೆಗೆ ಬಳ್ಳಾರಿ ನಗರದ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ನ.10 ರ ಮಧ್ಯಾಹ್ನ 02.30 ರೊಳಗೆ ಸಲ್ಲಿಸಬೇಕು.

ನಾಮಪತ್ರ ಪರಿಶೀಲನೆ ನ.11 ರ ಬೆಳಿಗ್ಗೆ 11.30 ರಿಂದ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.12 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ಗಂಟೆಯ ವರೆಗೆ ಅವಕಾಶ ಇರಲಿದೆ. ಅದೇ ದಿನ ಮಧ್ಯಾಹ್ನ 03.30 ರ ನಂತರ ಚುನಾವಣಾ ಚಿನ್ಹೆಗಳನ್ನು ಹಂಚಿಕೆ ಮಾಡಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ನ.22 ರ ಶನಿವಾರ ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಕೌಲ್ ಬಜಾರ್ ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ)ವಕ್ಫ್ ಸಂಸ್ಥೆಗೆ ಚುನಾವಣೆ ನಡೆಸಿ, ಅದೇ ದಿನ ಸಂಜೆ 04 ಗಂಟೆಯಿ0ದ ಮತ ಎಣಿಕೆ ನಡೆಸಲಾಗುವುದು ಎಂದು ಕೌಲ್ ಬಜಾರ್ ನ ದೀವಾನ್ ಎ ಮಸ್ತಾನ ದರ್ಗಾ(ಸುನ್ನಿ) ಚುನಾವಣಾಧಿಕಾರಿ ಆದ ಕಲಬುರುಗಿ ವಿಭಾಗೀಯ ವಕ್ಫ್ ಅಧಿಕಾರಿ ನೂರ್ ಪಾಷಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು