LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ


ಶಿವಮೊಗ್ಗ, ನವೆಂಬರ್.12:  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನವೆಂಬರ್ ತಿಂಗಳ ದಿ:20/11/2025 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವೀಸಿಂಗ್ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಶಿಬಿರಾರ್ಥಿಗಳು ನ. 20 ಬೆಳಗ್ಗೆ 10.00 ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/ 9591514154/ 9686248369 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು