Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಕೆಎಂಎಫ್‌ನಲ್ಲಿ 16.5 ಕೋಟಿ ರೂ. ಹಣದ ವಹಿವಾಟಿನ ತನಿಖೆಗೆ ಧನುಂಜಯ ಹಮಾಲ್ ಆಗ್ರಹ

ಬಳ್ಳಾರಿ, ಅ.15: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ರಾಬಕೊವಿ) ವ್ಯಾಪ್ತಿಯಲ್ಲಿ ಜಾನುವಾರುಗಳ ವಿಮೆ ಹಾಗೂ ರೈತ ಕಲ್ಯಾಣ ಟ್ರಸ್ಟ್‌ಗೆ ಸಂಬಂಧಿಸಿದ ಸುಮಾರು 16.5 ಕೋಟಿ ರೂ.ಹಣದ ವಹಿವಾಟಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸರ್ಕಾರದ ಮಾಜಿ ನಾಮನಿರ್ದೇಶಿತ ಸದಸ್ಯ ಎನ್. ಧನುಂಜಯ ಹಮಾಲ್ ಒತ್ತಾಯಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಿಂದ 2026ರವರೆಗಿನ ಅವಧಿಯಲ್ಲಿ ವಿಮಾ ಪರಿಹಾರ ಹಾಗೂ ರೈತ ಕಲ್ಯಾಣ ಟ್ರಸ್ಟ್‌ಗೆ ಸೇರಿದ ಹಣವನ್ನು ಅರ್ಹ ರೈತರಿಗೆ ಪಾವತಿಸದೆ, ಇತರರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂಬ ಆರೋಪಗಳಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಜಾನುವಾರುಗಳ ವಿಮೆಗೆ ಸಂಬಂಧಿಸಿದಂತೆ ಮೃತಪಟ್ಟ ಜಾನುವಾರುಗಳ ಕುರಿತು ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಶಂಕೆಯೂ ಇದೆ. ಹೀಗಾಗಿ ವಿಮಾ ಪರಿಹಾರ ವಿತರಣೆ, ಟ್ರಸ್ಟ್‌ನ ಹಣಕಾಸು ವ್ಯವಹಾರಗಳು, ಬ್ಯಾಂಕ್ ಖಾತೆಗಳಿಗೆ ನಡೆದ ಹಣ ವರ್ಗಾವಣೆ ಹಾಗೂ ಜಾನುವಾರುಗಳ ಸಾವಿಗೆ ಸಂಬಂಧಿಸಿದ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಹೇಳಿದರು.
ಈ ಹಣಕಾಸು ವ್ಯವಹಾರಗಳಲ್ಲಿ ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಸಂಬಂಧಪಟ್ಟವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಯಾವುದೇ ಅಕ್ರಮಗಳು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಜತೆಗೆ, ಅರ್ಹ ರೈತರಿಗೆ ವಿಮಾ ಪರಿಹಾರ ಮತ್ತು ಇತರ ಸೌಲಭ್ಯಗಳು ತಲುಪಿರುವುದನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸದಾಶಿವ ರೆಡ್ಡಿ, ಬಸವನ ಗೌಡ, ಪ್ರಭಾಕರ್ ರೆಡ್ಡಿ, ಉಮಾಪತಿ, ತಿಮ್ಮರೆಡ್ಡಿ, ಬಸವರಾಜ ಸ್ವಾಮಿ ಹಾಗೂ ರಾಮು ಗೌಡ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ