LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್ 1-8 ರವರೆಗೆ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

*ಸಿನಿಮಾಸಕ್ತರಿಗೆ ಸುವರ್ಣಾವಕಾಶ*

ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಸಾಮಾಜಿಕ ನ್ಯಾಯ ಎಂಬ ಥೀಮ್‌ ಆಧರಿಸಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು . ಈ ಬಾರಿಯೂ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್ ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ: ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*9 ಕೋಟಿ ರೂ.ಗಳ ವೆಚ್ಚ*

2006 ರಿಂದ ಪ್ರಾರಂಭವಾದ ಚಲನಚಿತ್ರೋತ್ಸವ ಇದೀಗ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ. ಕಳೆದ ವರ್ಷ 7 ಕೋಟಿ ರೂ. ವೆಚ್ಚವಾಗಿತ್ತು. ಈ ವರ್ಷ 9 ಕೋಟಿ ರೂ.ಗಳ ವೆಚ್ಚದಲ್ಲಿ ಚಲನಚಿತ್ರೋಸವ ನಡೆಸಲು ಸಮಿತಿ ತೀರ್ಮಾನಿಸಿದೆ ಎಂದರು.

1 ರಂದು ಉದ್ಘಾಟನೆ, 8 ರಂದು ಸಮಾರೋಪ ಸಮಾರಂಭ ಜರುಗಲಿದೆ. ಸಮಿತಿಯು ಸಿನಿಮೋತ್ಸವದ ರಾಯಭಾರಿಯನ್ನು ತೀರ್ಮಾನಿಸಲಿದೆ. ಸಮಾರಂಭವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳವರು.

ಬಜೆಟ್ ಪೂರ್ವಭಾವಿ ಚರ್ಚೆಗಳಿರುವುದರಿಂದ ಮಾರ್ಚ್ 1 ರಿಂದ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಚಲನಚಿತ್ರಮಂದಿಗಳು ಮುಚ್ಚುವ ಪರಿಸ್ಥಿತಿಯಲ್ಲಿರುವಾಗ, ಚಿತ್ರರಂಗಕ್ಕೆ ಸರ್ಕಾರದ ಬೆಂಬಲದ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು 16 ನೇ ಅಂತರರಾಷ್ಟ್ರೀಯ ಸಿನಿಮೋತ್ಸವ. ಈ ಬಾರಿಯ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯಾಧಾರಿತವಾದ ಚಲನಚಿತ್ರೋತ್ಸವವನ್ನು ಈ ಬಾರಿ ಏರ್ಪಡಿಸಲಾಗುವುದು. ಕನ್ನಡ ಚಲನಚಿತ್ರಗಳ ಉತ್ತೇಜನ ನೀಡುವಂತಹ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳ ಸಹಾಯಧನಕ್ಕಾಗಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ಚಿತ್ರಗಳನ್ನು ವೀಕ್ಷಿಸುತ್ತಿದೆ. ಎಂದರು.

ಮೈಸೂರಿನಲ್ಲಿ ಚಿತ್ರನಗರಿ

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಸರ್ಕಾರ ಈಗಾಗಲೇ 110 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿದ್ದು, ಪಿಪಿಪಿ ಮಾದರಿಯಲ್ಲಿ ಚಿತ್ರನಗರಿಯನ್ನು ನಿರ್ಮಾಣದ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.

ಸದಭಿರುಚಿಯ ಚಿತ್ರಗಳನ್ನು ವೀಕ್ಷಿಸುವೆ

ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರಗಳನ್ನು ವೀಕ್ಷಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು , ಸಮಯಾವಕಾಶವಾದರೆ, ಸದಭಿರುಚಿಯ ಚಲನಚಿತ್ರಗಳನ್ನು ವೀಕ್ಷಿಸಲು ಪ್ರಯತ್ನಿಸುತ್ತೇನೆ ಎಂದರು.

*ಎಂಎಲ್ ಸಿ ನಾಮನಿರ್ದೇಶನ

ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರವನ್ನು ಕೈಗೊಳ್ಳಲಿದ್ದು, ಸಿನಿಮಾ , ಸಾಹಿತ್ಯ, ಸಾಮಾಜಿಕ ಕ್ಷೇತ್ರಗಳೂ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು ಎಂದರು.

*ಭೋಜನಕೂಟದಲ್ಲಿ ರಾಜಕೀಯ ಚರ್ಚೆಯಾಗಲಿಲ್ಲ*

ಸಚಿವ ಸತೀಶ್ ಜಾರಕಿಹೊಳಿಯವರ ಆಹ್ವಾನದ ಮೇರೆಗೆ ಭೋಜನಕೂಟದಲ್ಲಿ ಭಾಗಹಿಸಲಾಗಿತ್ತು. ರಾಜಕೀಯ ವಿಚಾರಗಳು ಚರ್ಚಿಯಾಗಿಲ್ಲ. ಪಕ್ಷವನ್ನು ಗಟ್ಟಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಾಧ್ಯಮಗಳಲ್ಲಿ ಊಹಾಪೋಹದ ವರದಿಗಳು ಬಂದಿವೆ. ಹೊಸ ವರ್ಷದ ಪ್ರಯುಕ್ತ ಭೋಜನಕೂಟ ಏರ್ಪಡಿಸಲಾಗಿತ್ತು ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆ