LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

17 ದಿನಗಳ ಕಾಲ ವಿದ್ಯಾರ್ಥಿಗಳಿಗೆ ದಸರಾ ರಜೆ: ಈ ಶಾಲೆಗಳಿಗೆ ರಜೆ ಅನ್ವಯವಾಗುವುದಿಲ್ಲ..?

ಬೆಂಗಳೂರು :ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆ ನೀಡಲಾಗಿದೆ. ಆದರೆ ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ ಎಂದು ಸರ್ಕಾರ ಘೋಷಿಸಿದೆ.

ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುವುದರಿಂದ ಆ ಶಾಲೆಗಳ ರಜೆಯ ದಿನಾಂಕ ಹಾಗೂ ರಜೆಯ ಅವಧಿ ಬೇರೆಯಾಗಿರುತ್ತದೆ.

ಅಕ್ಟೋಬರ್ 3ರಿಂದ 20ರ ತನಕ ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆ ಇದ್ದು,  ಅಕ್ಟೋಬ‌ರ್ 21 ರಿಂದ ಶೈಕ್ಷಣಿಕ ಸಾಲಿನ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ.

ದಸರಾಕ್ಕಾಗಿ ಅ.3 ರಿಂದ 20ರ ವರೆಗೆ ದಸರಾ ರಜೆಯನ್ನು ಘೋಷಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ.ಎಸ್ಎಸ್ಎಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಅ.1 ಕ್ಕೆ ಮುಕ್ತಾಯವಾಗಲಿದೆ. ಅ.2 ಗಾಂಧಿ ಜಯಂತಿ ಮುಗಿಯುತ್ತಿದ್ದಂತೆ ದಸರಾ ರಜೆ ಆರಂಭಗೊಳ್ಳಲಿದೆ.

ಮಂಗಳೂರಿನಲ್ಲೂ ಇದೇ ದಿನಾಂಕಗಳಂದು ರಜೆ ನೀಡಲಾಗಿದೆ. ಈ ಹಿಂದೆ ಮಂಗಳೂರು, ಉಡುಪಿ ಪ್ರಾಂತ್ಯದಲ್ಲಿ ವಿದ್ಯಾರ್ಥಿಗಳ ದಸರಾ ರಜೆಯಲ್ಲಿ ಸ್ವಲ್ಪ ಮಾರ್ಪಾಡು ಆಗುತ್ತಿತ್ತು. ಉಳಿದೆಡೆಗೆ ಕೊಡಲಾಗುವ ರಜೆಗೆ ಹೋಲಿಸಿದರೆ ಮಂಗಳೂರಿನಲ್ಲಿ ದಸರಾ ರಜೆ ವ್ಯತ್ಯಾಸವಾಗುತ್ತಿತ್ತು. ಆದರೆ, ಈ ಬಾರಿ ಅಂಥ ಯಾವುದೇ ಬದಲಾವಣೆ ಆಗಿಲ್ಲ. ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ರೀತಿ, ಒಂದೇ ಅವಧಿಯ ರಜೆಯನ್ನು ನೀಡಲಾಗಿದೆ.

 



ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ ತಿಂಗಳು ಅನುಶ್ರೀ ಮದುವೆನಾ?ಈ ಕಾರಣಕ್ಕೆ ರಥಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರ…!ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ತರಬೇತಿಯಲ್ಲಿ ಸಿಕ್ಸ್ ಪ್ಯಾಕ್ ಪ್ರದರ್ಶಿಸಿದ ವಿರಾಟ್ ಕೊಹ್ಲಿಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!