LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ವಂಚನೆ..!

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ 16 ಶಾಖೆ ಹೊಂದಿದೆ. ಮಂಗಳೂರಿನ ಪಡೀಲ್​ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್​ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಬ್ಯಾಂಕ್​ನ ಸರಪ ವಿವೇಕ್ ಆಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್​ಗಾಗಿ ಹುಡುಕಾಟ ಮುಂದುವರೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್