LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೌಟುಂಬಿಕ  ಕಲಹ ಹಿನ್ನೆಲೆ 2 ತಿಂಗಳ ಗರ್ಭಿಣಿ ನೇಣಿಗೆ ಶರಣು.!

 

ಚಿತ್ರದುರ್ಗ : ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪುಷ್ಪ ಎಂಬ ಮಹಿಳೆ (25) ನೇಣು 2 ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಕಾಟಿಹಳ್ಳಿ ಗ್ರಾಮದ ಹರೀಶ್ ನಗರದ ಖಾಸಗಿ ಗಾರ್ಮೆಂಟ್ಸ್ ಕಾರ್ಮಿಕನಾಗಿದ್ದ. ಈ ವೇಳೆ ಈ ಗಾರ್ಮೆಂಟ್ಸ್‌ಗೆ ತೆರಳ್ತಿದ್ದ ಪುಷ್ಪ ಹಾಗೂ ಹರೀಶ್ ಮಧ್ಯೆ ಪ್ರೇಮಾಂಕುರವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದ್ರೆ ಅನ್ಯಜಾತಿ ಎಂಬ ಕಾರಣಕ್ಕೆ ಹರೀಶ್ ಹಾಗೂ ಪುಷ್ಪ ಪೋಷಕರ ಮಧ್ಯೆ ತಾರತಮ್ಯ ಭಾವವಿದ್ದು, ಹರೀಶ್ ಮನೆಗೆ ಪುಷ್ಪ ಪೋಷಕರಿಗೆ ಎಂಟ್ರಿ ಇರಲಿಲ್ಲ. ಆದರೂ ಎದೆಗುಂದದೇ ಪತಿಯೇ ಪರದೈವ ಎಂದು ನಂಬಿ ಸತತ ಎರಡು ವರ್ಷಗಳಿಂದ ಅನ್ಯೋನ್ಯವಾಗಿದ್ದ ಪುಷ್ಪ ಹಾಗೂ ಹರೀಶ್‌ಗೆ ಒಂದೂವರೆ ವರ್ಷದ ಒಂದು ಮದ್ದಾದ ಗಂಡು ಮಗುವಿದೆ.

ಈ ಮದ್ಯೆ, ಸಣ್ಣಪುಟ್ಟ ವಿಚಾರಕ್ಕೆ ಪದೇ ಪದೇ ಕೌಟಂಬಿಕ ಕಲಹ ಶುರುವಾಗಿದ್ದು, ಪರಸ್ಪರ ವಿಚ್ಛೇದನ ಪಡೆಯುವ ಮಟ್ಟಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಗ ರಾಜಿಸಂಧಾನದೊಂದಿಗೆ ಮನೆಗೆ ತೆರಳಿದ್ದ ಪುಷ್ಪ ನೇಣಿಗೆ ಶರಣಾಗಿದ್ದಾಳೆ. ಈ ವೇಳೆ ಮನೆಯಲ್ಲಿದ್ದ ಪತಿ ಹರೀಶ್ ಅಸ್ವಸ್ಥಳಾಗಿದ್ದ ಪತ್ನಿಯನ್ನು ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಪುಷ್ಪ ಕೊನೆಯುಸಿರೆಳೆದಿದ್ದಾಳೆ. ಇನ್ನು ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026