LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'20 ವರ್ಷದ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ'- ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಸಾರ್ವಜನಿಕವಾಗಿ ಮದ್ಯ ಹಂಚಿಕೆ ಅಕ್ಷಮ್ಯ ಮತ್ತು ಅಪರಾಧವಾಗಿದೆ. ನಾನು ನನ್ನ 20 ವರ್ಷದ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿನಂದನಾ ಕಾರ್ಯಕ್ರಮವನ್ನು ನಾನು ಆಯೋಜನೆ ಮಾಡಿರಲಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ನನ್ನ ಆಹ್ವಾನಿಸಿದರು. ನಾನು ಮತ್ತು ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮರಳಿದೆವು. ನಂತರ ಈ ಬೆಳವಣಿಗೆಗಳು ನಡೆದಿವೆ ಎಂದು ತಿಳಿಸಿದರು.

ನಾನು ಮಾಧ್ಯಮಗಳಲ್ಲಿ ಈ ಬಗ್ಗೆ ನೋಡಿ ತಿಳಿದೆ. ಯಾರು ಮದ್ಯ ಹಂಚಿದ್ದಾರೆ ಎಂದು ನನಗೆ ತಿಳಿದಿಲ್ಲ. ಮುಖಂಡರಿಗೂ ಕರೆ ಮಾಡಿ ಈ ರೀತಿಯಲ್ಲಿ ಮಾಡಬಾರದಿತ್ತು ಎಂದು ಹೇಳಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರವಹಿಸುತ್ತೇವೆ ಎಂದರು.

ಇನ್ನು ಬಿಜೆಪಿ ಸಂಸದ ಡಾ ಕೆ. ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉತ್ತರಿಸಬೇಕು. ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು. ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿ