Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು ಮ್ಯಾರಥಾನ್​ನಲ್ಲಿ 20 ಸಾವಿರ ಮಂದಿ ಭಾಗಿ, ಮ್ಯಾರಥಾನ್​​ಗೆ ವಿಪ್ರೋ ಪ್ರಾಯೋಜಕತ್ವ

ಸುದ್ದಿಮೂಲ ವಾರ್ತೆ

ಬೆಂಗಳೂರು: ಮೇ 25: 10ನೇ ಆವೃತ್ತಿಯ ಬೆಂಗಳೂರು ಮ್ಯಾರಥಾನ್ ಇದೇ ವರ್ಷ ಅಕ್ಟೋಬರ್ 8ರ ಭಾನುವಾರ ನಡೆಯಲಿದೆ. ಈ ಮ್ಯಾರಥಾನ್​ನ ಲೋಗೋವನ್ನ ಗುರುವಾರ ಬಿಡುಗಡೆ ಮಾಡಲಾಯಿತು. ಮುಂದಿನ 3 ವರ್ಷಗಳಿಗೆ ಬೆಂಗಳೂರು ಮ್ಯಾರಥಾನ್ ಓಟದ ಶೀರ್ಷಿಕೆ ಪ್ರಾಯೋಜಕರಾಗಲು ಪ್ರತಿಷ್ಠಿತ ವಿಪ್ರೋ ಲಿಮಿಟೆಡ್ ಸಂಸ್ಥೆಯು ಎನ್‌ಇಬಿ ಸ್ಪೋರ್ಟ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಈ ಮ್ಯಾರಥಾನ್ ಆರಂಭವಾಗಿ, ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಮತ್ತೆ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಅತ್ಯಂತ ಜನಪ್ರಿಯತೆ ಪಡೆದಿರುವ ‘ಸಿಟಿ ರನ್’ನಲ್ಲಿ ವಿವಿಧ ವಯೋಮಾನದ 20 ಸಾವಿರಕ್ಕೂ ಹೆಚು ಓಟಗಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮ್ಯಾರಥಾನ್ ಮೂರು ವಿಭಾಗಗಳಲ್ಲಿ ನಡೆಯಲಿದೆ. 42.195 ಕಿ.ಮೀ. ಪೂರ್ಣ ಮ್ಯಾರಥಾನ್, 21.1 ಕಿ.ಮೀ. ಹಾಫ್ ಮ್ಯಾರಥಾನ್ ಹಾಗೂ 5 ಕಿ.ಮೀ. ಹೋಪ್ ರನ್. ಈ ಓಟವು ಅಂತಾರಾಷ್ಟ್ರೀಯ ಮ್ಯಾರಾಥಾನ್‌ಗಳ ಸಂಸ್ಥೆ (ಎಐಎಂಎಸ್)ಯಿಂದ ಮಾನ್ಯತೆ ಪಡೆದಿದೆ.

ಪ್ರಧಾನ ಸ್ಪರ್ಧೆಗೆ ಓಟಗಾರರನ್ನು ತಯಾರಾಗಿಸಲು ಎನ್‌ಇಬಿ ಸ್ಪೋರ್ಟ್ಸ್ ನಗರದಾದ್ಯಂತ ಹಲವು ಚಟುವಟಿಕೆಗಳನ್ನು ಆಯೋಜಿಸಲಿದೆ. ಸ್ಪರ್ಧಿಗಳಲ್ಲಿ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಪ್ರಧಾನ ಸ್ಪರ್ಧೆಯ ಸಿದ್ಧತೆಗಾಗಿ 3 ಅಭ್ಯಾಸ ಓಟಗಳನ್ನು ಆಯೋಜಿಸಲಾಗುತ್ತದೆ. ಇವುಗಳಲ್ಲಿ ವಿಕಲ ಚೇತನರು, ಅಂಧರು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಮ್ಯಾರಥಾನ್‌ನ ಎನ್‌ಜಿಒ ಪಾಟ್ನರ್​ ಆದ ಸ್ನೇಹಾ ಕೇರ್ ಹೋಮ್‌ನಲ್ಲಿ ಮಕ್ಕಳಿಗಾಗಿ ಓಟವೊಂದನ್ನು ನಡೆಸಲಾಗುತ್ತದೆ.

‘ಈ ಪ್ರತಿಷ್ಠಿತ ಕಾರ್ಯಕ್ರಮದೊಂದಿಗೆ ಕೈಜೋಡಿಸಿರುವುದಕ್ಕೆ ಬಹಳ ಹೆಮ್ಮೆ ಇದೆ ಹಾಗೂ ನನ್ನ ಮೇಲೆ ಹೆಚ್ಚಿನ ಜವಾಬ್ದಾರಿ ಹೊರಿಸಿದೆ. ಒಬ್ಬ ಅಥ್ಲೀಟ್ ಆಗಿ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಉಳಿಯಬೇಕಿದ್ದರೆ ಫಿಟ್ ಆಗಿರುವುದು ಹಾಗೂ ಆರೋಗ್ಯವಾಗಿರುವುದು ಎಷ್ಟು ಮುಖ್ಯ ಎನ್ನುವುದು ನನಗೆ ತಿಳಿದಿದೆ ಎಂದು ವಿಪ್ರೋ ಬೆಂಗಳೂರು ಮ್ಯಾರಥಾನ್‌ನ ಪ್ರಚಾರ ರಾಯಭಾರಿ, ಅರ್ಜುನ ಪ್ರಶಸ್ತಿ ವಿಜೇತೆ ರೀತ್ ಅಬ್ರಾಹಾಂ ಹೇಳಿದರು. ಈ ಓಟದಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳನ್ನು ಹುರಿದುಂಬಿಸಲು ಹೆಚ್ಚೆಚ್ಚು ಸಂಖ್ಯೆಯಲ್ಲಿ ನಾಗರಿಕರು ಆಗಮಿಸಲಿದ್ದಾರೆ ಎನ್ನುವ ವಿಶ್ವಾಸವಿದೆ. ಇದೊಂದು ಕ್ರೀಡಾಕೂಟ ಎನ್ನುವುದಕ್ಕಿಂತ ಸಮುದಾಯದ ಒಂದು ಕಾರ್ಯಕ್ರಮವಾಗಿ ಬದಲಾಗಬೇಕು’ ಎಂದರು.

ಬೆಂಗಳೂರು ಮ್ಯಾರಥಾನ್‌ನ ಶೀರ್ಷಿಕೆ ಪ್ರಾಯೋಜಕರಾಗಿರುವುದು ಬಹಳ ಖುಷಿ ನೀಡಿದೆ. ಕಳೆದ 17 ವರ್ಷಗಳಿಂದ ‘ಸ್ಪಿರಿಟ್ ಆಫ್ ವಿಪ್ರೋ’ ಹೆಸರಿನಲ್ಲಿ ನಮ್ಮ ಉದ್ಯೋಗಿಗಳಿಗೆ ಓಟವನ್ನು ಆಯೋಜಿಸುತ್ತಿದ್ದೇವೆ. ಸಮುದಾಯದಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಇದು ಮತ್ತೊಂದು ಮಹತ್ವದ ಹೆಜ್ಜೆ. ಆರೋಗ್ಯಕರ ಜೀವನಶೈಲಿಯನ್ನು ರೂಪಿಸಿಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸಲು ಹಾಗೂ ಬೆಂಬಲಿಸಲು ಇದು ಅತ್ಯುತ್ತಮ ಅವಕಾಶ’ ಎಂದು ವಿಪ್ರೋ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಜತಿನ್ ದಲಾಳ್ ಹೇಳಿದರು.

10ನೇ ಆವೃತ್ತಿಯ ಈ ವಿಶೇಷ ಸಂದರ್ಭದಲ್ಲಿ ವಿಪ್ರೋ ಜೊತೆ ಒಪ್ಪಂದಕ್ಕೆ ಸಹಿ ಹಾಕಿರುವುದು ಬಹಳ ಸಂತಸವಾಗಿದೆ. ಓಟಗಾರರ ಆರೋಗ್ಯ ಹಾಗೂ ಯೋಗಕ್ಷೇಮ ನಮ್ಮ ಮೊದಲ ಆದ್ಯತೆ. ಮುಂದೆಯೂ ಅದಕ್ಕೇ ನಾನು ಹೆಚ್ಚು ಗಮನ ನೀಡಲಿದ್ದೇವೆ. ಇದು ಪ್ರತಿಯೊಬ್ಬ ಓಟಗಾರನ ವಾರ್ಷಿಕ ಕ್ಯಾಲೆಂಡರ್‌ನ ಅತ್ಯಂತ ನಿರೀಕ್ಷಿತ ಸ್ಪರ್ಧೆಯಾಗಿದೆ. ‘ಸಿಟಿ ರನ್’ ಎಲ್ಲರಲ್ಲೂ ಹೆಮ್ಮೆ ಹಾಗೂ ಸೇರುವಿಕೆಯನ್ನು ಮೂಡಿಸುತ್ತದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜನರನ್ನು ಹುರಿದುಂಬಿಸಲಿದೆ’ ಎಂದು ರೇಸ್ ನಿರ್ದೇಶಕ ನಾಗರಾಜ್ ಅಡಿಗ ಹೇಳಿದರು.

ಮ್ಯಾರಥಾನ್ ಸಾಗುವ ದಾರಿಯಲ್ಲಿ ಸಹಾಯ ಕೇಂದ್ರಗಳು, ನೀರು, ವೈದ್ಯಕೀಯ ವ್ಯವಸ್ಥೆ, ಆ್ಯಂಬುಲೆನ್ಸ್ ಇತ್ಯಾದಿ ಇರಲಿವೆ. ಪರಿಸರ ಸ್ನೇಹಿ ಅಭ್ಯಾಸಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ನಿಯಮಿತ ಪ್ಲಾಸ್ಟಿಕ್ ಹಾಗೂ ಪೇಪರ್ ಬಳಕೆಯಾಗಲಿದೆ. ಉಪಹಾರಗಳಿಗೆ ಪರಿಸರ ಸ್ನೇಹಿ ಕಪ್ ಹಾಗೂ ತಟ್ಟೆಗಳನ್ನು ಬಳಸಲು ತೀರ್ಮಾನಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ