Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

20ನೇ ವರ್ಷದ ಪದವಿ ಪ್ರದಾನ ಸಮಾರಂಭ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲ್ಲೂಕಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ
  R. L. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ  ಕಾಲೇಜಿನ ಸಭಾಂಗಣದಲ್ಲಿ  20ನೇ ವರ್ಷದ ಪದವೀಧರರಿಗೆ  ಪದವಿ ಪ್ರಧಾನ ಕಾರ್ಯಕ್ರಮವನ್ನು  ಆಯೋಜನೆ ಮಾಡುವ ಮೂಲಕ  ನೂರಾರು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

  ಗಣ್ಯರು  ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಪದವೀಧರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

  ನಂತರ ಕಾಲೇಜಿನ ಉಪಾಧ್ಯಕ್ಷ  ಜೆ ರಾಜೇಂದ್ರ ಮಾತನಾಡಿ ನಮ್ಮ ವಿದ್ಯಾಸಂಸ್ಥೆಯು   2001ರಲ್ಲಿ ಆರಂಭವಾಗಿದ್ದು ನಿರಂತರ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ  ಸಹಕಾರಿಯಾಗಿರುವುದು ಶ್ಲಾಘನೀಯ. ಈಗಾಗಲೇ ನಮ್ಮ ವಿದ್ಯಾಸಂಸ್ಥೆಯಿಂದ 7000ಕ್ಕೂ ಅಧಿಕ ವಿದ್ಯಾರ್ಥಿಗಳು ಪದವಿ ಪಡೆದು ಸಮಾಜದ ಮುಖ್ಯವಾಹಿನಿಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.

ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ  ಸೇವೆ ಸಲ್ಲಿಸುತ್ತಿದ್ದು, ಉದ್ಯಮಿಗಳಾಗಿ ಸಾವಿರಾರು ಕಾರ್ಮಿಕರಿಗೆ ಆಧಾರವಾಗಿ ಶ್ರಮಿಸುತ್ತಿರುವುದು ನಮ್ಮ ಶಿಕ್ಷಣ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಆರ್ ಎಲ್ ಜಾಲಪ್ಪನವರ ಆಶಯದಂತೆ ಇಂದಿಗೂ ನಮ್ಮ ಸಂಸ್ಥೆ ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳ ಏಳಿಗೆಗೆ  ಶ್ರಮಿಸುತ್ತಿದ್ದು. ಇಂದು 20ನೇ ವರ್ಷದ ಪದವಿ ಪ್ರಧಾನ ಕಾರ್ಯಕ್ರಮವನ್ನು ಹೆಮ್ಮೆಯಿಂದ ಆಚರಿಸಲಾಗುತ್ತಿದೆ ಎಂದರು.

  ನಮ್ಮ  R. L. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು AICTE, ನವದೆಹಲಿಯಿಂದ ಗುರುತಿಸಲ್ಪಟ್ಟಿದೆ, "A" ಗ್ರೇಡ್‌ನೊಂದಿಗೆ NAAC ನಿಂದ ಮಾನ್ಯತೆ ಪಡೆದಿದ್ದು ಉತ್ತಮ ವಿದ್ಯಾಭ್ಯಾಸ ಕೊಡುವಲ್ಲಿ  ಮುಂಚೂಣಿಯಲಿದೆ. ಈ ಬಾರಿ ಪದವೀಧರರಾಗಿರುವ  ವಿದ್ಯಾರ್ಥಿಗಳು ಸಮಾಜಕ್ಕೆ ಮತ್ತಷ್ಟು ಕೊಡುಗೆ ಕೊಡುವಂತಾಗಲಿ ಎಂದು ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

  20ನೇ ಪದವಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ನಿರ್ದೇಶಕ ದಿನೇಶ್ ಕುಮಾರ್ ಶರ್ಮಾ,ಪಾತ್‌ಫೈಂಡರ್ ಕನ್ಸಲ್ಟಿಂಗ್ ಸರ್ವಿಸಸ್  ಸಂಸ್ಥಾಪಕರಾದ ಸಾಕ್ಷಿ ಶರ್ಮಾ ಕಾಲೇಜಿನ ಅಧ್ಯಕ್ಷ ಜಿ.ಎಚ್.  ನಾಗರಾಜ, ಕಾರ್ಯದರ್ಶಿ   ಕೆ.ಜಿ.  ಹನುಮಂತ ರಾಜು,ಮಾನವ ಸಂಪನ್ಮೂಲ ಅಧಿಕಾರಿ ಬಾಬುರೆಡ್ಡಿ, ಡಾ ಶ್ರೀನಿವಾಸ್ ರೆಡ್ಡಿ,ರೀ ಸರ್ಚ್ ಕ್ವಾಲಿಟಿ ನಿರ್ದೇಶಕರು ಹಾಗೂ ಉಪ ಪ್ರಾಂಶುಪಾಲರು ಡಾ. ಶಿವಪ್ರಸಾದ್, ಡಾ. ಸುನಿಲ್ ಕುಮಾರ್ ಆರ್ ಎಂ ಮುಖ್ಯಸ್ಥರು ಕಂಪ್ಯೂಟರ್ ವಿಭಾಗ, ಟ್ರಸ್ಟಿಗಳು, ನಿರ್ದೇಶಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ